alex Certify ದಕ್ಷಿಣ ಆಫ್ರಿಕಾದಲ್ಲಿ ಟೀಂ ಇಂಡಿಯಾ ಕಠಿಣಾಭ್ಯಾಸ: ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಯ್ತು ಈ ವಿಶೇಷ ವಿಡಿಯೋ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಕ್ಷಿಣ ಆಫ್ರಿಕಾದಲ್ಲಿ ಟೀಂ ಇಂಡಿಯಾ ಕಠಿಣಾಭ್ಯಾಸ: ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಯ್ತು ಈ ವಿಶೇಷ ವಿಡಿಯೋ

ದಕ್ಷಿಣ ಆಫ್ರಿಕಾ ತಂಡದ ವಿರುದ್ಧದ ಬಹುನಿರೀಕ್ಷಿತ ಟೆಸ್ಟ್​ ಹಾಗೂ ಏಕದಿನ ಸರಣಿಗಾಗಿ ಟೀಂ ಇಂಡಿಯಾ ತಂಡದ ಸದಸ್ಯರು ಎರಡು ದಿನಗಳ ಹಿಂದೆಯೇ ದಕ್ಷಿಣ ಆಫ್ರಿಕಾಗೆ ಬಂದಿಳಿದಿದ್ದಾರೆ. ದಕ್ಷಿಣ ಆಫ್ರಿಕಾಗೆ ಬಂದಿಳಿದ ಒಂದು ದಿನದ ಬಳಿಕ ಟೀಂ ಇಂಡಿಯಾ ಸದಸ್ಯರು ಸರಣಿಯ ಸಿದ್ಧತೆಗಳನ್ನು ಆರಂಭಿಸಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ಕೋಚ್​ ರಾಹುಲ್ ದ್ರಾವಿಡ್​ ನೇತೃತ್ವದಲ್ಲಿ ಟೀಂ ಇಂಡಿಯಾ ತಂಡದ ಆಟಗಾರರು ಕಠಿಣ ಅಭ್ಯಾಸಗಳಲ್ಲಿ ತೊಡಗಿದ್ದಾರೆ. ಈ ಕಠಿಣ ಅಭ್ಯಾಸದ ಸಾಕಷ್ಟು ವಿಡಿಯೋಗಳು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡಿ ಕ್ರಿಕೆಟ್​ ಅಭಿಮಾನಿಗಳನ್ನು ರಂಜಿಸಿದರೆ ವಿರಾಟ್​ ಕೊಹ್ಲಿ ಹಾಗೂ ದ್ರಾವಿಡ್​ ಪರಸ್ಪರ ಹೈ ಫೈ ನೀಡುತ್ತಿರುವ ಫೋಟೋಗಳು ಅಭಿಮಾನಿಗಳ ಮನಸ್ಸನ್ನೇ ಕದ್ದಿದೆ.

ಈ ವಿಡಿಯೋ ಹಾಗೂ ಫೋಟೋಗಳನ್ನು ನೆಟ್ಟಿಗರು ಸೋಶಿಯಲ್​ ಮೀಡಿಯಾದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳುವ ಮೂಲಕ ವಿರಾಟ್ ಕೊಹ್ಲಿ ಹಾಗೂ ರಾಹುಲ್​ ದ್ರಾವಿಡ್​ ಕಾಂಬಿನೇಷನ್​ಗಾಗಿ ನಾವು ಎದುರು ನೋಡುತ್ತಿದ್ದೇವೆ ಎಂದು ಹೇಳಿದ್ದಾರೆ. ಓರ್ವ ಅಭಿಮಾನಿಯಂತೂ ಈ ದೃಶ್ಯಗಳು ನನಗೆ ಹೊಟ್ಟೆಯಲ್ಲಿ ಚಿಟ್ಟೆ ಬಿಟ್ಟಂತಹ ಅನುಭವ ನೀಡ್ತಿದೆ ಎಂದು ಹೇಳಿದ್ದಾರೆ.

— ???? ♡̷̷ˎˊ (@Mansi_vk03) December 18, 2021

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...