ರಾಯಚೂರು: ರಾಯಚೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಮಾಜಿ ಸಂಸದ ಬಿ.ವಿ. ನಾಯಕ್ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದಾರೆ.
ಮಾನ್ವಿ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದಕ್ಕೆ ಬೇಸತ್ತು ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಫ್ಯಾಕ್ಸ್ ಮೂಲಕ ರಾಜೀನಾಮೆ ಪತ್ರ ರವಾನಿಸಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಬಣ ರಾಜಕೀಯದಿಂದ ಬೇಸತ್ತು ಅವರು ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಮುಖರ ವಿರುದ್ಧ ಬಿ.ವಿ. ನಾಯಕ್ ಮುನಿಸಿಕೊಂಡಿದ್ದಾರೆ.
ಕಾಂಗ್ರೆಸ್ ನ ಮಾಜಿ ಸಂಸದ ಬಿ.ವಿ. ನಾಯಕ್ ದೇವದುರ್ಗ ಮತ್ತು ಮಾನ್ವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಗೆ ಬೇಡಿಕೆ ಇಟ್ಟಿದ್ದರು. ಆದರೆ ಟಿಕೆಟ್ ಸಿಗದೇ ಹಿನ್ನೆಲೆಯಲ್ಲಿ ನಿನ್ನೆ ಹುಬ್ಬಳ್ಳಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿ.ವಿ. ನಾಯಕ್ ಸೊಸೆ ಶ್ರೀದೇವಿ ಅವರಿಗೆ ದೇವದುರ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ನೀಡಿದೆ.
ಬಿಜೆಪಿ ಇನ್ನೂ ಕೂಡ ಮಾನ್ವಿ ಕ್ಷೇತ್ರದ ಟಿಕೆಟ್ ಘೋಷಿಸದೆ ಉಳಿಸಿಕೊಂಡಿದೆ. ಬಿಜೆಪಿಗೆ ಸೇರ್ಪಡೆಯಾಗಿರುವ ನಾಯಕ್ ಮಾನ್ವಿ ಕ್ಷೇತ್ರದ ಟಿಕೆಟ್ ಪಡೆಯುವ ಸಾಧ್ಯತೆ ಇದೆ.