ಬೆಂಗಳೂರು: ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವಿರುದ್ಧ ಪಕ್ಷದ ಹೈಕಮಾಂಡ್ ಗೆ ದೂರು ನೀಡಲಾಗಿದೆ.
ಪದಾಧಿಕಾರಿಗಳ ನೇಮಕಾತಿಯಲ್ಲಿ ಹಗರಣ ನಡೆಸಲಾಗಿದೆ ಎಂದು ಶ್ರೀನಿವಾಸ್ ವಿರುದ್ಧ ಆರೋಪ ಮಾಡಲಾಗಿದೆ. ಎನ್.ಎಸ್.ಯು.ಐ., ಯುವ ಕಾಂಗ್ರೆಸ್ ಸದಸ್ಯರಿಂದ ದುಡ್ಡು ಪಡೆದಿದ್ದಾರೆ. ಯುವ ಕಾಂಗ್ರೆಸ್ ಇಮೇಜ್ ಡ್ಯಾಮೇಜ್ ಮಾಡಿದ್ದಾರೆ ಎಂದು ಇ -ಮೇಲ್ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಅವರಿಗೆ ದೂರು ನೀಡಲಾಗಿದೆ.
ಪದಾಧಿಕಾರಿಗಳ ನೇಮಕಾತಿಯಲ್ಲಿ ಹಗರಣ ನಡೆಸಿದ ಶ್ರೀನಿವಾಸ್ ಅವರನ್ನು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕೆಂದು ದೂರು ನೀಡಲಾಗಿದೆ ಎನ್ನಲಾಗಿದೆ.