
ನವದೆಹಲಿ: ಲೋಕಸಭೆ ಚುನಾವಣೆ ಹಾಗೂ ವರ್ಷಾಂತ್ಯದ ವೇಳೆಗೆ ನಡೆಯುವ 5 ರಾಜ್ಯಗಳ ವಿಧಾನಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟದಲ್ಲಿ ಬದಲಾವಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.
ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಹಲವು ನಾಯಕರು ಸಮಾಲೋಚನೆ ನಡೆಸಿದ್ದು, ಸಂಪುಟ ಪರಿಷ್ಕರಣೆಯಾಗುವ ಸಾಧ್ಯತೆ ಇದೆ. ಸಂಪುಟ ಪುನಾರಚನೆ ಚರ್ಚೆ ನಡುವೆ ರಾಜ್ಯದಲ್ಲಿ ಮತ್ತೊಬ್ಬರಿಗೆ ಕೇಂದ್ರ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ರಾಜ್ಯದಿಂದ 25 ಲೋಕಸಭೆ ಸದಸ್ಯರಿದ್ದು, ಹೆಚ್ಚಿನವರಿಗೆ ಸಚಿವ ಸ್ಥಾನ ನೀಡಿಲ್ಲ. ಪ್ರಹ್ಲಾದ ಜೋಶಿ, ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ನಾರಾಯಣಸ್ವಾಮಿ ಹಾಗೂ ರಾಜ್ಯಸಭೆ ಸದಸ್ಯರಾದ ನಿರ್ಮಲಾ ಸೀತಾರಾಮನ್, ರಾಜೀವ್ ಚಂದ್ರಶೇಖರ್ ಕೇಂದ್ರದಲ್ಲಿ ಮಂತ್ರಿಗಳಾಗಿದ್ದಾರೆ.
ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಸಚಿವ ಸ್ಥಾನ ನೀಡುವ ಸಂಭವವಿದೆ. ಈ ನಿಟ್ಟಿನಲ್ಲಿ ವರಿಷ್ಠರು ಸಮಾಲೋಚನೆ ನಡೆಸಿದ್ದಾರೆ ಎಂದು ಹೇಳಲಾಗಿದೆ.