alex Certify BIG NEWS: ಆಗುಂಬೆ ಘಾಟ್ ನಲ್ಲಿ 4 ಪಥದ ಸುರಂಗ ರಸ್ತೆ ನಿರ್ಮಾಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆಗುಂಬೆ ಘಾಟ್ ನಲ್ಲಿ 4 ಪಥದ ಸುರಂಗ ರಸ್ತೆ ನಿರ್ಮಾಣ

ನವದೆಹಲಿ: ಕೇಂದ್ರ ಭೂಸಾರಿಗೆ ಮಂತ್ರಾಲಯದ ಸಚಿವ ನಿತಿನ್ ಗಡ್ಕರಿ ಅವರನ್ನು ಅವರ ಗೃಹ ಕಚೇರಿಯಲ್ಲಿ ಶಿವಮೊಗ್ಗ ಜಿಲ್ಲಾ ಸಂಸದ ಬಿ.ವೈ. ರಾಘವೇಂದ್ರ ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ ಅಭಿವೃದ್ಧಿಯಾಗಬೇಕಾದ ಹೆದ್ದಾರಿ ಕಾಮಗಾರಿಗಳ ಅಗತ್ಯತೆಗಳ ಬಗ್ಗೆ ಚರ್ಚಿಸಿ ಯೋಜನೆಗಳಿಗೆ ಅನುಮೋದನೆ ದೊರಕಿಸಿಕೊಡಲು ಮನವಿ ಮಾಡಿದ್ದಾರೆ.

ಆಗುಂಬೆ ಘಾಟಿ ರಸ್ತೆಗೆ ಪರ್ಯಾಯವಾಗಿ ಮೇಗರವಳ್ಳಿಯಿಂದ ಸೋಮೇಶ್ವರದವರೆಗೆ 4 ಪಥದ ಸುರಂಗ ಮಾರ್ಗದ ರಸ್ತೆ ನಿರ್ಮಾಣ.

ಕುಂದಾಪುರದಿಂದ ಗಂಗೊಳ್ಳಿ ಬಂದರಿನವರೆಗೆ 5.60 ಕಿ.ಮೀ ಉದ್ದದ ರಸ್ತೆ ಹಾಗೂ ಭಾರಿ ಸೇತುವೆ ನಿರ್ಮಾಣ.

ರಾ. ಹೆದ್ದಾರಿ 766 ಸಿ ಬೈಂದೂರಿನಿಂದ ವಿವಿಧೋದ್ದೇಶ ಬಂದರಿನವರೆಗೆ ತಾರಾಪತಿ ಅಳವೆಕೋಡಿ ಮೂಲಕ ವಿಸ್ತರಣೆ ಮಾಡಿ 3.80 ಕಿ.ಮೀ ಉದ್ದದ ರಸ್ತೆ ಹಾಗೂ ಸೇತುವೆಗಳ ನಿರ್ಮಾಣ.

ರಾ. ಹೆದ್ದಾರಿ 766 ಸಿ ಬೈಂದೂರಿನಿಂದ ರಾಣಿಬೆನ್ನೂರಿನವರೆಗೆ ಬಾಕಿ ಉಳಿದ ಭಾಗಗಳಲ್ಲಿ ದ್ವಿಪಥ ರಸ್ತೆ ನಿರ್ಮಾಣ

ರಾ. ಹೆದ್ದಾರಿ 369 ಇ ಸಾಗರದಿಂದ ಮರಕುಟಕವರೆಗೆ ದ್ವಿಪಥ ರಸ್ತೆ(ಸಾಗರ ಪಟ್ಟಣದ ಬೈಪಾಸ್ ರಸ್ತೆ ಸೇರಿ) ನಿರ್ಮಾಣ ಮಾಡಲು ಕೋರಿದ್ದಾರೆ.

ಇದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಸಂಬಂದಿಸಿದ ಕೇಂದ್ರ ಭೂಸಾರಿಗೆ ಮಂತ್ರಾಲಯದ ಅಧಿಕಾರಿಗಳಿಗೆ ಸದರಿ ಕಾಮಗಾರಿಗಳ ಯೋಜನಾ ವರದಿ ತಯಾರಿಸಲು ಸಮಾಲೋಚಕರನ್ನು ತಕ್ಷಣ ನಿಯೋಜಿಸಲು ಸೂಚಿಸಿದ್ದು, ಯೋಜನಾ ವರದಿ ಪಡೆದು ಮಂಜೂರಾತಿ ನೀಡಲು ಸಹ ಕ್ರಮವಹಿಸಲು ಸೂಚಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...