ಶಿವಮೊಗ್ಗ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಂದೇ ಪ್ರಧಾನಿ ನರೇಂದ್ರ ಮೋದಿ ಮಹಿಳೆಯರಿಗೆ ಗಿಫ್ಟ್ ನೀಡಿದ್ದಾರೆ.
ಎಲ್ಪಿಜಿ ಸಿಲಿಂಡರ್ ದರದಲ್ಲಿ 100 ರೂ. ಕಡಿತ ಮಾಡಲಾಗಿದೆ. ಮಾರ್ಚ್ 8ರ ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಯಾಗಿದೆ. ಶಿವಮೊಗ್ಗದಲ್ಲಿ ಸಿಲಿಂಡರ್ ದರ 916 ರೂ. ನಿಂದ 816 ರೂ.ಗೆ ಇಳಿಕೆಯಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.
ಉಜ್ವಲ ಯೋಜನೆ ಫಲಾನುಭವಿಗಳಿಗೆ ಎಲ್‌ಪಿಜಿ ಸಿಲಿಂಡರ್ ಬೆಲೆ 516 ರೂಪಾಯಿ ಆಗಲಿದೆ. ಉಜ್ವಲ ಯೋಜನೆಯ ಫಲಾನುಭವಿಗಳಿಗೆ ವರ್ಷಕ್ಕೆ 14.2 ಕೆಜಿಯ 12 ರೀಫಿಲ್ ಗಳಿಗೆ 300 ರೂ. ಸಬ್ಸಿಡಿ ಮುಂದುವರೆಸಲು ಅನುಮೋದನೆ ನೀಡಲಾಗಿದ್ದು, ಇದರಿಂದ ದೇಶಾದ್ಯಂತ ಲಕ್ಷಾಂತರ ಬಡ ಕುಟುಂಬಗಳ ಆರ್ಥಿಕ ಹೊರೆ ಕಡಿಮೆಯಾಗಲಿದೆ ಎಂದು ಸಂಸದರು ಹೇಳಿದ್ದಾರೆ.