
ಹಾವೇರಿ: ಮುಖ್ಯಮಂತ್ರಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟರೆ ಮನೆ ಸೇರುತ್ತಾರೆ. ಯಾರಾದರೂ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಮಲಗುತ್ತಾರೆ. ಪ್ರತಿಪಕ್ಷದವರು ಯಡಿಯೂರಪ್ಪನವರ ಬಗ್ಗೆ ಅದನ್ನೇ ತಿಳಿದಿದ್ದರು. ಆದರೆ, ಯಡಿಯೂರಪ್ಪ ರೀತಿ ಮಾಡಲಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಆಡೂರು ಗ್ರಾಮದಲ್ಲಿ ಚುನಾವಣೆ ಪ್ರಚಾರದಲ್ಲಿ ಮಾತನಾಡಿದ ವಿಜಯೇಂದ್ರ, ಯಡಿಯೂರಪ್ಪ ಮುಂದಿಟ್ಟ ಹೆಜ್ಜೆಯನ್ನು ಎಂದೂ ಹಿಂದೆ ಇಟ್ಟಿಲ್ಲ. ಅವರು ಸವಾಲು ಹಾಕಿದರೆ ಯಾವ ಮಟ್ಟಕ್ಕೆ ಹೋಗಬಹುದು ಎಂಬುದು ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಗೊತ್ತಿದೆ ಎಂದು ಹೇಳಿದ್ದಾರೆ.