alex Certify ಸಿಎಂ ಪದತ್ಯಾಗಕ್ಕೆ ಕ್ಷಣಗಣನೆ, ದಸರಾ ಬಳಿಕ ಸಿದ್ದರಾಮಯ್ಯ ರಾಜೀನಾಮೆ: ವಿಜಯೇಂದ್ರ ಸ್ಪೋಟಕ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಪದತ್ಯಾಗಕ್ಕೆ ಕ್ಷಣಗಣನೆ, ದಸರಾ ಬಳಿಕ ಸಿದ್ದರಾಮಯ್ಯ ರಾಜೀನಾಮೆ: ವಿಜಯೇಂದ್ರ ಸ್ಪೋಟಕ ಹೇಳಿಕೆ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದಸರಾ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಖಚಿತವಾಗಿದೆ. ಇದು ರಾಜಕೀಯ ಹೇಳಿಕೆಯಲ್ಲ, ಸಿದ್ದರಾಮಯ್ಯ ರಾಜೀನಾಮೆಗೆ ಕ್ಷಣಗಣನೆ ಆರಂಭವಾಗಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಸಂದರ್ಭದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡಬಹುದು. ಹೈಕಮಾಂಡ್ ರಾಜೀನಾಮೆ ಪಡೆಯುವ ಚಿಂತನೆ ನಡೆಸಿದೆ. ಹೈಕಮಾಂಡ್ ಏನು ಚರ್ಚೆ ನಡೆಸುತ್ತಿದೆ ಎಂಬುದು ಸಿದ್ದರಾಮಯ್ಯನವರಿಗೂ ಗೊತ್ತಿದೆ. ನಮ್ಮ ಉದ್ದೇಶ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಬೇಕು ಎಂಬುದಲ್ಲ, ಬದಲಾಗಿ ಭ್ರಷ್ಟ ಕಾಂಗ್ರೆಸ್ ಮುಖ್ಯಮಂತ್ರಿ ರಾಜ್ಯಕ್ಕೆ ಶಾಪವಾಗಿದ್ದು, ಅವರು ಕೆಳಗಿಳಿಯಬೇಕು ಎಂಬುದಾಗಿದೆ ಎಂದು ಹೇಳಿದ್ದಾರೆ.

ಸಿದ್ಧರಾಮಯ್ಯ ನಂತರ ಯಾರು ಮುಖ್ಯಮಂತ್ರಿ ಆಗುತ್ತಾರೆ ಎಂಬುದು ನಮಗೆ ಗೊತ್ತಿಲ್ಲ. ಅದು ಅವರ ಪಕ್ಷಕ್ಕೆ ಬಿಟ್ಟ ವಿಚಾರ ಎಂದು ವಿಜಯೇಂದ್ರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...