alex Certify BIG NEWS: ‘ಗ್ಯಾರಂಟಿ ಸಮಿತಿ’ ವಿರುದ್ಧ ಕಾನೂನು ಹೋರಾಟ: ವಿಜಯೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ‘ಗ್ಯಾರಂಟಿ ಸಮಿತಿ’ ವಿರುದ್ಧ ಕಾನೂನು ಹೋರಾಟ: ವಿಜಯೇಂದ್ರ

ಬೆಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಮೇಲುಸ್ತುವಾರಿಗೆ ರಾಜ್ಯ, ಜಿಲ್ಲೆ, ಮತ್ತು ತಾಲೂಕು ಮಟ್ಟದಲ್ಲಿ ಸಮಿತಿ ರಚಿಸುವುದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತಾಗಿ ರಾಜ್ಯಪಾಲರನ್ನು ಕೂಡ ಭೇಟಿ ಮಾಡಿ ದೂರು ನೀಡುತ್ತೇವೆ. ಸರ್ಕಾರಿ ನೌಕರರಿಗೆ ಕೊಡಲು ಹಣ ಇಲ್ಲ. ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ಹೆಚ್ಚಳ ಮಾಡಿಲ್ಲ. ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ. ಇಂತಹ ಸಂದರ್ಭದಲ್ಲಿ ತೆರಿಗೆ ಹಣ ಪೋಲು ಮಾಡುತ್ತಿದ್ದಾರೆ. ಜನರ ಹಣ ಇರುವುದು ಕಾರ್ಯಕರ್ತರಿಗೆ ಕೊಡಲು ಅಲ್ಲ ಎಂದು ಹೇಳಿದ್ದಾರೆ.

ನಿನ್ನೆ, ಇವತ್ತು 28 ಕ್ಷೇತ್ರಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಸಂಸದರು, ಶಾಸಕರು, ಪಕ್ಷದ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಇಡೀ ದೇಶದಲ್ಲಿ ಬಿಜೆಪಿ ಪರ ವಾತಾವರಣ ಇದೆ. ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆ ಆಗಿರಬಹುದು. ಪ್ರಸ್ತುತ ಕೆಲವು ಘಟನೆಗಳಿಂದ ರಾಜ್ಯದಲ್ಲಿ ನಮಗೆ ಈಗ ಪೂರಕ ವಾತಾವರಣ ಇದೆ. ಸಭೆಯಲ್ಲಿ ಎಲ್ಲರೂ ಅಭಿಪ್ರಾಯ, ಸಲಹೆ ಕೊಟ್ಟಿದ್ದಾರೆ. ಎಲ್ಲ ಗಮನದಲ್ಲಿಟ್ಟುಕೊಂಡು ವರಿಷ್ಠರಿಗೆ ತಿಳಿಸುತ್ತೇವೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...