ಬೆಂಗಳೂರು: ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ.
ಬದಲಾಗದಿರುವುದು ಕಾರ್ಯಕರ್ತ ಅನ್ನೋದು, ನಾನೊಬ್ಬ ಸಾಮಾನ್ಯ ಕಾರ್ಯಕರ್ತ. 35 ವರ್ಷಗಳ ರಾಜಕೀಯ ಜೀವನದಲ್ಲಿ ಬಹಳಷ್ಟು ವಿಷಯ ಮಾತನಾಡಿಬಿಟ್ಟಿದ್ದೇನೆ. ಈಗ ಏನಾದರೂ ಮಾತನಾಡಿದರೆ ನಮ್ಮ ಮಾತೇ ನಮಗೆ ತಿರುಗುಬಾಣವಾಗುತ್ತದೆ ಎಂದು ಹೇಳಿದ್ದಾರೆ.
ಪಕ್ಷ ನೇಮಕ ಮಾಡಿದೆ. ಇನ್ನೇನಿದ್ದರೂ ಪಕ್ಷ ಕಟ್ಟಿ ಬೆಳೆಸುವ ಕೆಲಸ ಮಾಡಬೇಕು. ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನ ಗೆಲ್ಲಿಸುವ ಹೊಣೆ ಇದೆ, ಯಶಸ್ವಿಯಾಗಲಿ. ಬೂತ್ ಅಧ್ಯಕ್ಷ ಸ್ಥಾನದಿಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯವರೆಗೆ ಕಾರ್ಯನಿರ್ವಹಿಸಿದ್ದೇನೆ ಎಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿ.ಟಿ. ರವಿ ಹೇಳಿದ್ದಾರೆ.