ಬೆಂಗಳೂರು: ಜನವರಿ 22ರಂದು ಅಯೋಧ್ಯೆ ಶ್ರೀ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನೆರವೇರಲಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಜೆ ಘೋಷಣೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ.
ಕೇಂದ್ರ ಸರ್ಕಾರ ಜ. 22 ರಂದು ಅರ್ಧ ದಿನ ರಜೆ ಘೋಷಿಸಿದೆ. ಅನೇಕ ರಾಜ್ಯಗಳು ಅರ್ಧ ದಿನ ರಜೆ ಘೋಷಣೆ ಮಾಡಿವೆ. ರಾಜ್ಯದಲ್ಲಿಯೂ ಸರ್ಕಾರ ರಜೆ ಘೋಷಿಸಬೇಕು. ಹಿಂದೂಗಳು ಪ್ರಾಣ ಪ್ರತಿಷ್ಠಾಪನೆ ವೀಕ್ಷಿಸಲು ಅವಕಾಶ ಮಾಡಿಕೊಡಬೇಕು ಎಂದು ಹೇಳಿದ್ದಾರೆ.
ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಜನವರಿ 22ರಂದು ರಜೆ ಘೋಷಣೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.