ನವದೆಹಲಿ: ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ವೈ. ವಿಜಯೇಂದ್ರ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಶ್ಲಾಘಿಸಿದ್ದಾರೆ.
ವಿಜಯೇಂದ್ರ ಪಕ್ಷಕ್ಕೆ ಸಾಕಷ್ಟು ಶ್ರಮ ವಹಿಸಿದ್ದಾರೆ. ರಾಜ್ಯದೆಲ್ಲೆಡೆ ಸುತ್ತಾಡಿ ಪಕ್ಷ ಸಂಘಟನೆ ಮಾಡಿದ್ದಾರೆ ಎಂದು ಹಿಂದಿ ಪತ್ರಿಕೆಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ತಿಳಿಸಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ನಡ್ಡಾ, ವಿಜಯೇಂದ್ರ ತಮ್ಮ ಸ್ವ -ಸಾಮರ್ಥ್ಯದ ಮೂಲಕ ನಾಯಕತ್ವ ಗಳಿಸಿದ್ದಾರೆ. ಪಕ್ಷ ಸಂಘಟನೆಗೆ ಸಾಕಷ್ಟು ಸಮಯ ಮೀಸಲಿಟ್ಟಿದ್ದಾರೆ. ಅವರ ಕಾರ್ಯನಿರ್ವಹಣೆಯಿಂದ ಬಿಜೆಪಿಗೆ ಲಾಭವಾಗಿದೆ. ತಾವು ಪಕ್ಷಕ್ಕೆ ದೊಡ್ಡ ಆಸ್ತಿ ಎಂಬುದನ್ನು ವಿಜಯೇಂದ್ರ ಸಾಬೀತುಪಡಿಸಿದ್ದಾರೆ ಎಂದು ಹೇಳಿದ್ದಾರೆ.
ಬಿಜೆಪಿಯು ಶ್ರಮಶೀಲ ಯುವಶಕ್ತಿಯನ್ನು ಗೌರವಿಸುತ್ತದೆ ಮತ್ತು ಪ್ರೋತ್ಸಾಹಿಸುತ್ತದೆ. ನಾವು ಯಾವಾಗಲೂ ಧನಾತ್ಮಕ ಬದಲಾವಣೆ, ಸುಧಾರಣೆಗೆ ಪ್ರತಿಪಾದಿಸಿದ್ದೇವೆ. ವಿಜಯೇಂದ್ರ ನೇಮಕ ಸಕಾರಾತ್ಮಕ ಬೆಳವಣಿಗೆ ಉತ್ತೇಜಿಸುವ ಬದ್ಧತೆಯನ್ನು ಸೂಚಿಸುತ್ತದೆ. ಕರ್ನಾಟಕ ಬಿಜೆಪಿ ಘಟಕದಲ್ಲಿ ಗಮನಾರ್ಹ ಬದಲಾವಣೆ ನಿರೀಕ್ಷಿಸಬಹುದಾಗಿದೆ ಎಂದು ವಿಜಯೇಂದ್ರ ನೇಮಕಾತಿಯನ್ನು ಸಮರ್ಥಿಸಿಕೊಂಡಿದ್ದಾರೆ.