ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಮಾಜಿ ಸಿಎಂ ಬಿ.ಎಸ್.ವೈ. ಪುತ್ರ ಹಾಗೂ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಅವಕಾಶ ಸಿಗಲಿದೆ ಎಂದು ಹೇಳಲಾಗಿತ್ತು.
ಆದರೆ, ವಿಜಯೇಂದ್ರರಿಗೆ ನೂತನ ಸಚಿವ ಸಂಪುಟದಲ್ಲಿ ಅವಕಾಶ ಸಿಗದ ಹಿನ್ನೆಲೆಯಲ್ಲಿ ಬೆಂಬಲಿಗರೊಬ್ಬರು ಬ್ಲೇಡ್ ನಿಂದ ಕೈ ಕೊಯ್ದುಕೊಂಡಿದ್ದಾರೆ. ಯಡಿಯೂರಪ್ಪ ಮನೆಯ ಬಳಿ ಬುಧವಾರ ಈ ಘಟನೆ ನಡೆದಿದೆ. ವಿಜಯೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಸಂಭ್ರಮದಿಂದ ಮಂಡ್ಯದಿಂದ ಆಗಮಿಸಿದ್ದ ಶಿವಕುಮಾರ ಆರಾಧ್ಯ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅವರು ಕೈಕೊಯ್ದುಕೊಂಡಿದ್ದಾರೆ. ಗಾಯಗೊಂಡ ಶಿವಕುಮಾರ್ ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ ಎನ್ನಲಾಗಿದೆ.