alex Certify ವರಿಷ್ಠರು ಚರ್ಚೆ ಮಾಡಿಯೇ ನನಗೆ ಜವಾಬ್ದಾರಿ ನೀಡಿದ್ದಾರೆ: ನ. 15 ರಂದು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ಸ್ವೀಕರಿಸುತ್ತೇನೆ: ಬಿ.ವೈ. ವಿಜಯೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವರಿಷ್ಠರು ಚರ್ಚೆ ಮಾಡಿಯೇ ನನಗೆ ಜವಾಬ್ದಾರಿ ನೀಡಿದ್ದಾರೆ: ನ. 15 ರಂದು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ಸ್ವೀಕರಿಸುತ್ತೇನೆ: ಬಿ.ವೈ. ವಿಜಯೇಂದ್ರ

ತುಮಕೂರು: ನವೆಂಬರ್ 15ರಂದು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ಸ್ವೀಕರಿಸುತ್ತೇನೆ ಎಂದು ನೂತನ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ತುಮಕೂರಿನ ಸಿದ್ದಗಂಗಾ ಮಠದಲ್ಲಿ ಮಾತನಾಡಿದ ಅವರು, ಮಲ್ಲೇಶ್ವರಂ ರಾಜ್ಯ ಬಿಜೆಪಿ ಕಚೇರಿಯಲ್ಲಿ ನವೆಂಬರ್ 15 ರಂದು ಬೆಳಿಗ್ಗೆ 10 ಗಂಟೆಗೆ ಪಕ್ಷದ ಅಧ್ಯಕ್ಷನಾಗಿ ಜವಾಬ್ದಾರಿ ಸ್ವೀಕರಿಸಲಿದ್ದು, ನವೆಂಬರ್ 16ರಂದು ಕಾರ್ಯಕರ್ತರ ಸಭೆ ನಡೆಸುವ ನಿರ್ಣಯ ಮಾಡಿದ್ದೇವೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಭೆ ನಡೆಸಲು ನಿರ್ಧರಿಸಿದ್ದೇವೆ. ಪಕ್ಷದ ಎಲ್ಲಾ ಹಿರಿಯರ ಸಮ್ಮುಖದಲ್ಲಿ ಜವಾಬ್ದಾರಿ ಸ್ವೀಕರಿಸುತ್ತೇನೆ ಎಂದು ಹೇಳಿದ್ದಾರೆ.

ಕೇಂದ್ರದ ವರಿಷ್ಠರು ಚರ್ಚೆ ಮಾಡಿಯೇ ನನಗೆ ಜವಾಬ್ದಾರಿ ನೀಡಿದ್ದಾರೆ. ಬೇರೆ ಕಡೆ ಚುನಾವಣೆ ಇರುವುದರಿಂದ ರಾಷ್ಟ್ರೀಯ ನಾಯಕರು ಬರುತ್ತಿಲ್ಲ. ಜವಾಬ್ದಾರಿ ಸ್ವೀಕಾರದ ದಿನ ಕೇಂದ್ರದ ವೀಕ್ಷಕರು ಬರುವ ಸಾಧ್ಯತೆ ಇದೆ. ಇದಕ್ಕಿಂತ ಮೊದಲು ಸಿದ್ದಲಿಂಗ ಶ್ರೀಗಳ ಆಶೀರ್ವಾದ ಪಡೆದಿದ್ದೇನೆ. ತಂದೆಯವರು ಏನೇ ಜವಾಬ್ದಾರಿ ತೆಗೆದುಕೊಳ್ಳುವಾಗ ಸಿದ್ದಗಂಗೆಗೆ ಭೇಟಿ ನೀಡಿ ಆಶೀರ್ವಾದ ಪಡೆದು ಮುಂದೆ ಸಾಗುತ್ತಿದ್ದರು. ಅದೇ ರೀತಿ ಇಲ್ಲಿಗೆ ಬಂದು ಪೂಜ್ಯರ ಆಶೀರ್ವಾದ ಪಡೆದಿದ್ದೇನೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...