alex Certify ಕಾಂಗ್ರೆಸ್ ಅಭ್ಯರ್ಥಿಗಳು ಸೋತಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ತೊಂದರೆ: ಸಚಿವ ಬೈರತಿ ಸುರೇಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಅಭ್ಯರ್ಥಿಗಳು ಸೋತಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ತೊಂದರೆ: ಸಚಿವ ಬೈರತಿ ಸುರೇಶ್

ಕೋಲಾರ: ಕಾಂಗ್ರೆಸ್ ಅಭ್ಯರ್ಥಿಗಳು ಸೋತಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ತೊಂದರೆಯಾಗುತ್ತದೆ. ಹಾಗಾಗಿ ಕುರುಬ ಸಮುದಾಯದವರು ಸಿದ್ದರಾಮಯ್ಯನವರ ಕೈ ಬಲಪಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೋಲಾರದ ಹಾಲಿಸ್ಟರ್ ಭವನದಲ್ಲಿ ಆಯೋಜಿಸಿದ್ದ ಕುರುಬ ಸಮುದಾಯದವರ ಸಭೆಯಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿಗಳು ಸೋತರೆ ಸಿದ್ದರಾಮಯ್ಯ ಅವರ ಸ್ಥಾನಕ್ಕೆ ತೊಂದರೆಯಾಗುವುದರಿಂದ ಅವರ ಕೈ ಬಲಪಡಿಸಬೇಕು. ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ. ಗೌತಮ್ ಅವರನ್ನು ಗೆಲ್ಲಿಸಲು ಸಹಕಾರ ನೀಡಬೇಕು ಎಂದು ಕೋರಿದ್ದಾರೆ.

ಲೋಕಸಭೆ ಚುನಾವಣೆಯ ನಂತರ ಸಿದ್ದರಾಮಯ್ಯ ಅವರನ್ನು ಕಿತ್ತೆಸೆಯುವುದಾಗಿ ವಿಪಕ್ಷ ನಾಯಕರು ಹೇಳುತ್ತಿದ್ದಾರೆ. ಅದಕ್ಕೆಲ್ಲ ಅವಕಾಶ ಮಾಡಿಕೊಡಬೇಡಿ, ಸಿದ್ದರಾಮಯ್ಯನವರ ಕೈ ಬಲಪಡಿಸಿ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...