ಬೆಂಗಳೂರು: ಕಾಂಗ್ರೆಸ್ ನಾಯಕ, ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಜೆಡಿಎಸ್ ಸೇರುವುದು ಖಚಿತವಾಗಿದೆ.
ಇಂದು ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಸಿ.ಎಂ. ಇಬ್ರಾಹಿಂ ಸಮಾಲೋಚನೆ ನಡೆಸಿದ್ದಾರೆ. ಹಿಂದೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಎರಡು ಸಲ ಇಬ್ರಾಹಿಂ ಅವರನ್ನು ಭೇಟಿಯಾಗಿ ಪಕ್ಷಕ್ಕೆ ಆಹ್ವಾನಿಸಿದ್ದರು.
ಮೊದಲು ಜನತಾಪರಿವಾರದಲ್ಲಿದ್ದ ಇಬ್ರಾಹಿಂ ಕಾಂಗ್ರೆಸ್ ನಲ್ಲಿದ್ದರು. ಈಗ ಜೆಡಿಎಸ್ ಸೇರಿ ಪಕ್ಷದ ರಾಜ್ಯಾಧ್ಯಕ್ಷರಾಗಲಿದ್ದಾರೆ. ಜನತಾಪರಿವಾರವನ್ನು ಒಂದುಗೂಡಿಸುವ ಉದ್ದೇಶದೊಂದಿಗೆ ಇಬ್ರಾಹಿಂ ಜೆಡಿಎಸ್ ಸೇರಲು ತೀರ್ಮಾನಿಸಿದ್ದಾರೆ.
ರಾಜ್ಯದ ಜನರ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ರಾಷ್ಟ್ರಮಟ್ಟದಲ್ಲಿ ಜನತಾಪರಿವಾರವನ್ನು ಒಗ್ಗೂಡಿಸುವ ಪ್ರಯತ್ನ ನಡೆಸುವುದಾಗಿ ಅವರು ಹೇಳಿದ್ದು, ಸ್ವಾರ್ಥಕ್ಕಾಗಿ ಜೆಡಿಎಸ್ ಪಕ್ಷ ಸೇರುತ್ತಿಲ್ಲ ಎಂದು ತಿಳಿಸಿದ್ದಾರೆ.