ಬೆಂಗಳೂರು: ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತಂತೆ ಶಿಕ್ಷಣ ಇಲಾಖೆ ಆಯುಕ್ತರು ವರದಿ ನೀಡಿದ್ದು, ಸರ್ಕಾರದಿಂದ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಖಾಸಗಿ ಶಾಲೆಗಳನ್ನು ಆರಂಭಿಸಲು ಈಗಾಗಲೇ ಸಿದ್ಧತೆ ಕೈಗೊಳ್ಳಲಾಗಿದೆ. ಆದರೆ, ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ಇನ್ನೊಮ್ಮೆ ಚರ್ಚಿಸಿ ಶಾಲೆ ಆರಂಭಿಸುವ ಬಗ್ಗೆ ತೀರ್ಮಾನಿಸಲಾಗುತ್ತದೆ ಎಂದು ಖಾಸಗಿ ಶಾಲೆಗಳ ಪ್ರಮುಖ ಒಕ್ಕೂಟದ ಪ್ರಮುಖರು ಹೇಳಿದ್ದಾರೆ.
ರಾಜ್ಯದಲ್ಲಿ ಶಾಲೆ ಆರಂಭದ ಬಗ್ಗೆ ದುಡುಕುವುದು ಬೇಡವೆಂದು ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್. ಸಿ.ಎನ್. ಮಂಜುನಾಥ್ ತಿಳಿಸಿದ್ದಾರೆ.
ಕೇರಳ, ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಆಗಸ್ಟ್ 15 ರ ವರೆಗೂ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವುದು ಸೂಕ್ತವಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಇನ್ನೆರಡು ವಾರಗಳ ಕಾಲ ಕಾದು ನೋಡಿದ ನಂತರ ಶಾಲೆ ಆರಂಭಿಸುವುದು ಒಳ್ಳೆಯದು. ಶಾಲೆ ಆರಂಭದ ವಿಚಾರದಲ್ಲಿ ದುಡುಕಿನ ನಿರ್ಧಾರ ಒಳ್ಳೆಯದಲ್ಲವೆಂದು ಮಂಜುನಾಥ್ ತಿಳಿಸಿದ್ದಾರೆ.
ಈ ಹಿಂದೆ ಕೇರಳ, ಮಹಾರಾಷ್ಟ್ರದಲ್ಲಿ ಸೋಂಕು ತೀವ್ರ ಗತಿಯಲ್ಲಿ ಏರಿಕೆಯಾದ ಎರಡು ವಾರದ ನಂತರ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗಿತ್ತು. ಹೀಗಾಗಿ ಸದ್ಯಕ್ಕೆ ಶಾಲೆಗಳನ್ನು ಆರಂಭಿಸುತ್ತಿರುವುದು ಒಳ್ಳೆಯದಲ್ಲವೆಂದು ಹೇಳಲಾಗಿದೆ.