ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಅಖಾಡ ಪಕ್ಕಾ ರಾಜಕೀಯ ಚದುರಂಗದಾಟವಾಗಿ ಮಾರ್ಪಟ್ಟಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿಕೆ ಕೊಟ್ಟು, ನಾಳೆ ನಾಮಪತ್ರ ಸಲ್ಲಿಸುವುದಾಗಿಯೂ ಹೇಳಿದ್ದ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್, ಇದೀಗ ದಿಢೀರ್ ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಯಲ್ಲಿ ಪ್ರತ್ಯಕ್ಷವಾಗುವ ಮೂಲಕ ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ.
ಬೆಂಗಳೂರಿನ ಸದಾಶಿವ ನಗರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಯೋಗೇಶ್ವರ್, ಬಳಿಕ ಇಬ್ಬರೂ ನಾಯಕರು ಒಂದೇ ಕಾರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸಕ್ಕೆ ಆಗಮಿಸಿದ್ದಾರೆ. ಸಿಎಂ ನಿವಾಸದಲ್ಲಿ ಯೋಗೇಶ್ವರ್ ಕಾಂಗ್ರೆಸ್ಸೇರ್ಪಡೆ ನಿಟ್ಟಿನಲ್ಲಿ ಮಹತ್ವದ ಚರ್ಚೆ ನಡೆದಿದೆ.
ಸಭೆ ಬಳಿಕ ಸಿ.ಪಿ.ಯೋಗೇಶ್ವರ್ ಅವರನ್ನು ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಘೋಷಿಸುವ ಸಾಧ್ಯತೆ ದಟ್ಟವಾಗಿದೆ. ಈ ಮೂಲಕ ಚನ್ನಪಟ್ಟಣ ಚದುರಂಗದಾಟದಲ್ಲಿ ‘ಸೈನಿಕ’ ಬಿಜೆಪಿ-ಜೆಡಿಎಸ್ ನಾಯಕರಿಗೆ ಸೆಡ್ಡು ಹೊಡೆದಿದ್ದಾರೆ.