
ಬೆಂಗಳೂರು: ಚುನ್ನಪಟ್ಟಣ ಉಪಚುನವಣೆಗೆ ಸ್ಪರ್ಧಿಸಲು ಮುಂದಾಗಿರುವ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ವಿಧಾನ ಪರಿಷತ್ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ ಭೇಟಿಗಾಗಿ ಹುಬ್ಬಳ್ಳಿಗೆ ತೆರಳಿರುವ ಸಿ.ಪಿ.ಯೋಗೇಶ್ವರ್, ಇಂದು ನಾಲ್ಕು ಗಂಟೆಗೆ ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ.
ರಾಜೀನಾಮೆ ಬಳಿಕ ಚನ್ನಪಟ್ಟಣ ಉಪಚುನವಣಾ ಅಖಾಡಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಗ್ಗೆ ಅಥವಾ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಸಿ.ಪಿ.ಯೋಗೇಶ್ವರ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗಿದೆ.