ಬೆಂಗಳೂರು: ಮೇಲುಕೋಟೆ ಕ್ಷೇತ್ರದ ಶಾಸಕ ಸಿ.ಎಸ್. ಪುಟ್ಟರಾಜು ಅವರಿಗೆ ಸಂಕಷ್ಟ ಎದುರಾಗಿದೆ. ಮೂಡಾ ನಿವೇಶನ ಕೇಸ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.
ಕಾನೂನು ಬಾಹಿರವಾಗಿ ಮೂಡಾ ನಿವೇಶನ ಹಂಚಿಕೆ ಪಡೆದಿದ್ದರು. ಅವರು ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಪಡೆದಿದ್ದರು.
ಪತ್ನಿ ಹೆಸರಲ್ಲಿ ಮೈಸೂರಿನಲ್ಲಿ ಮುಡಾ ನಿವೇಶನ ಪಡೆದುಕೊಂಡಿದ್ದರು. ಈ ಮಾಹಿತಿಯನ್ನು ಮುಚ್ಚಿಟ್ಟು ಅವರು ಮಂಡ್ಯದಲ್ಲಿ ನಿವೇಶನ ಪಡೆದಿದ್ದು, ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದರು. ವಂಚನೆ, ನಂಬಿಕೆದ್ರೋಹ ಪ್ರಪ್ರಕರಣ ದಾಖಲಾಗಿದ್ದು, ಇದನ್ನು ರದ್ದುಪಡಿಸಬೇಕೆಂದು ಕೋರಿ ಶಾಸಕ ಸಿ.ಎಸ್. ಪುಟ್ಟರಾಜು ಮನವಿ ಮಾಡಿದ್ದರು. ಸಿಬಿಐ ಎ.ಪಿ.ಪಿ. ಪ್ರಸನ್ನಕುಮಾರ್ ಆಕ್ಷೇಪಣೆ ಸಲ್ಲಿಸಿದ್ದರು. ಪ್ರಕರಣ ರದ್ಧತಿಗೆ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ನಿರಾಕರಿಸಿದ್ದು, ಪ್ರಕರಣ ವಿಚಾರಣೆಗೆ ಹೈಕೋರ್ಟ್ ಅನುಮತಿ ನೀಡಿದೆ ಎನ್ನಲಾಗಿದೆ.