ಬೆಂಗಳೂರು: ಬಿಜೆಪಿ ಪರಿಷತ್ ಸದಸ್ಯ ಸಿ.ಟಿ.ರವಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪ್ರಕರಣದ ವಿಚಾರಣೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಧಾರ್ಮಿಕ ದ್ವೇಷ ಹರಡುವ ಯತ್ನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಟಿ.ರವಿ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.
ಪ್ರಕರಣ ಸಂಬಂಧ ಅಧೀನ ನ್ಯಾಯಾಲಯಗಳ ವಿಚಾರಣೆ ರದ್ದುಪಡಿಸುವಂತೆ ಕೋರಿ ಸಿ.ಟಿ.ರವಿ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾ. ನಾಗಪ್ರಸನ್ನ ಅವರಿದ್ದ ಪೀಠ, ವಿಚಾರಣೆಗೆ ತಡೆ ನೀಡಿ ಆದೇಶ ಹೊರಡಿಸಿದೆ. ಅಲ್ಲದೇ ಚುನಾವಣಾ ಅಧಿಕಾರಿಗಳಾಗಿದ್ದ ಚಿಕ್ಕಮಗಳೂರಿನ ಜಯಲಕ್ಷ್ಮಮ್ಮ ಹಾಗೂ ದೀಪಕ್ ಅರವಿಂದ್ ಗರಗ್ ಅವರಿಗೆ ನೊಟೀಸ್ ಜಾರಿ ಮಾಡಿದೆ.