ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ.
ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ಡಿ.19ರಂದು ವಿಧಾನಪರಿಷತ್ ಕಲಾಪದ ಸಂದರ್ಭದಲ್ಲಿ ಎಂಎಲ್ ಸಿ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರು. ಪ್ರಕರಣ ಸಂಬಂಧ ಸಿ.ಟಿ.ರವಿ ಬಂಧನವಾಗಿತ್ತು. ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಈ ನಡುವೆ ರಾಜ್ಯ ಬಿಜೆಪಿ ನಾಯಕರು ರಾಜ್ಯಪಾಲರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು.
ಈ ಎಲ್ಲಾ ಬೆಳವಣಿಗೆ ಬಳಿಕ ಇದೀಗ ಎಂಎಲ್ ಸಿ ಸಿ.ಟಿ.ರವಿ ಇಂದು ರಾಜ್ಯಪಾಲ ಠಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿದ್ದಾರೆ. ರಾಜಭವನಕ್ಕೆ ಆಗಮಿಸಿದ ಸಿ.ಟಿ.ರವಿ ರಾಜ್ಯಪಾಲರನ್ನು ಭೇಟಿಯಾಗಿ ಅಂದು ನಡೆದ ಘಟನೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ.