ಮಂಡ್ಯ: ಮಂಡ್ಯದ ಕೆರಗೋಡು ಗ್ರಾಮದಲ್ಲಿ ಧ್ವಜ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸಿ.ಟಿ.ರವಿ ವಿರುದ್ಧ ದೂರು ನೀಡಲಾಗಿದೆ.
ಕೆರಗೋಡು ಗ್ರಮದಲ್ಲಿ ಹನುಮ ಧ್ವಜ ಇಳಿಸಿ ರಾಷ್ಟ್ರಧ್ವಜ ಹಾರಿಸಿದ್ದ ಜಿಲ್ಲಾಡಳಿತದ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಸಿ.ಟಿ.ರವಿ, ಹನುಮ ಧ್ವಜ ಇಳಿಸಿ ತಾಲಿಬಾನ್ ಧ್ವಜ ಹಾರಿಸಲಾಗಿದೆ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸಿ.ಟಿ.ರವಿ ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ್ದಾರೆ ಎಂದು ಮಳವಳ್ಳಿ ಕಾಂಗ್ರೆಸ್ ಶಾಸಕ ನರೇಂದ್ರ ಸ್ವಾಮಿ ಸಿ.ಟಿ.ರವಿ ವಿರುದ್ಧ ಮಂಡ್ಯ ಎಸ್ ಪಿ ಯತೀಶ್ ಅವರಿಗೆ ದೂರು ನೀಡಿದ್ದಾರೆ.
ಸುದ್ದಿ ಸಂಸ್ಥೆಯೊಂದಕ್ಕೆ ಹಿಂದಿಯಲ್ಲಿ ನೀಡಿದ್ದ ಹೇಳಿಕೆಯಲ್ಲಿ ಸಿ.ಟಿ.ರವಿ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.