ಬೆಂಗಳೂರು: ಮೋದಿ ಮೋದಿ ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು ಎಂಬ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಮಾಜಿ ಶಾಸಕ ಸಿ.ಟಿ.ರವಿ, ಸಚಿವರನ್ನು ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಸಂಸ್ಕೃತಿಯೇ ಗೊತ್ತಿಲ್ಲದವರಿಗೆ ಕನ್ನಡ, ಸಂಸ್ಕೃತಿ ಇಲಾಖೆ ನೀಡಿದ್ದಾರೆ. ಸಚಿವರ ಹೇಳಿಕೆ ಇಲಾಖೆಗೆ ಮಾಡಿದ ಅವಮಾನ. ತಂಗಡಗಿ ಹೇಳಿಕೆಗೆ ನಾವೂ ತಿರುಗಿ ಹೇಳಬಹುದು ಆದರೆ ಆ ಮಟ್ಟಕ್ಕೆ ನಾವು ಇಳಿದು ಮಾತನಾಡಲ್ಲ. ಇಂತವರನ್ನು ಸಂಪುಟದಲ್ಲಿ ಇಟ್ಟುಕೊಳ್ಳಬಾರದು ಎಂದು ಕಿಡಿಕಾರಿದ್ದಾರೆ.
ತಕ್ಷಣ ಸಿಎಂ ಸಿದ್ದರಾಮಯ್ಯ, ಸಚಿವ ತಂಗಡಗಿಯವರನ್ನು ಸಂಪುಟದಿಂದ ವಜಾ ಮಾಡಲಿ ಎಂದು ಆಗ್ರಹಿಸಿದ್ದಾರೆ.