ಬೆಂಗಳೂರು: ಕೇರಳದ ವಯನಾಡು ನೆರೆ ಸಂತ್ರಸ್ತರಿಗೆ ಮನೆ ನಿರ್ಮಿಸಿಕೊಡುವ ಭರವಸೆ ನೀಡಿರುವ ಸಿಎಂ ಸಿದ್ದರಾಮಯ್ಯ, ಇದೀಗ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದಿರುವ ವಿಚಾರವಾಗಿ ಬಿಜೆಪಿ ಪರಿಷತ್ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ.
ರಾಜ್ಯದಲ್ಲಿನ ಬಾಣಂತಿಯರ ಸಾವು, ಶಿಶುಗಳ ಸಾವು, ರೈತರಿಗೆ ಬೆಳೆ ಪರಿಹಾರ, ಸಾಲು ಸಾಲು ಸಮಸ್ಯೆಗಳ ಬಗ್ಗೆ ಸ್ಪಂದಿಸುವ ಬದಲು ಕೇರಳದ ನೆರೆ ಸಂತ್ರಸ್ತರ ಸಂಕಷ್ಟಕ್ಕೆ ಮನೆ ನಿರ್ಮಿಸಿಕೊಡಲು ಮುಂದಾಗಿರುವ ಸಿಎಂ ಸಿದರಾಮಯ್ಯ ಕ್ರಮಕ್ಕೆ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯನವರ ವಯನಾಡು ಕಳಕಳಿ ಗುಲಾಮಗಿರಿಯ ಸಂಕೇತ ಎಂದು ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರ ಕೇರಳ ಸಂತ್ರಸ್ತರಿಗೆ ಮನೆ ನಿರ್ಮಿಸಿಕೊಡುವುದಾಗಿ ಹೇಳಿದೆ. ಮಾನವೀಯ ನೆಲೆಯಲ್ಲಿ ಮಾಡುವುದೇನೋ ಸರಿ. ಆದರೆ ಸಿದ್ದರಾಮಯ್ಯನವರ ಈ ನಡೆ ಮಾನವೀಯ ನೆಲೆಯಲ್ಲಿ ಕಾಣುತ್ತಿಲ್ಲ. ಇದು ಗುಲಾಮಗಿರಿಯ ಸಂಕೇತ. ಹಿಂದೆ ರಾಹುಲ್ ಗಾಂಧಿ, ಈಗ ಪ್ರಿಯಾಂಕಾ ಗಾಂಧಿ ಅಲ್ಲಿ ಸಂಸದರಾಗಿದ್ದಾರೆ. ನಮ್ಮ ರಾಜ್ಯದಲ್ಲಿ ಇಲ್ಲಿ ಬಾಣಂತಿಯರ ಸಾವು, ಎತ್ತಿನ ಹೊಳೆ ಯೋಜನೆ ಬಗ್ಗೆ ಅಧಿಕಾರಿಗಳ ಜೊತೆ ಜಗಳ ಮಾಡಿ ರೈತರೊಬ್ಬರು ಹೊಳೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದರ ಬಗ್ಗೆ ರಾಜ್ಯ ಸರ್ಕಾರಕ್ಕೆ ಕಾಳಜಿ ಇಲ್ಲ.
ಬಾಣಂತಿಯರ ಸಾವು, ಶಸುಗೂಸುಳ ಸಾವು, ಇಲ್ಲಿನ ಜನರ ಸಂಕಷ್ಟ ಬಿಟ್ಟು ಅಲ್ಲಿನ ಜನರಿಗೆ ಮನೆ ನಿರ್ಮಾಣದ ಬಗ್ಗೆ ಈಗ ಮುಂದಾಗಿರುವ ಸಿಎಂ ನಡೆ ಗುಲಾಮಗಿರಿ ಸಂಕೇತ ಈ ಬಗ್ಗೆ ನಾವು ವಿಧನಸಭೆಯಲ್ಲಿ ಚರ್ಚಿಸುತ್ತೇವೆ ಎಂದಿದ್ದಾರೆ. ಬಾಣಂತಿಯರ ಸಾವು, ಶಿಶುಗಳ ಸಾವು ಪ್ರಕರಣದ ತನಿಖೆಗೆ ಎಸ್ ಐಟಿ ರಚನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.