ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಸಿ.ಟಿ. ರವಿ ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ಬೆನ್ನಲ್ಲೇ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೂ, ಸಿಎಂ ಯಡಿಯೂರಪ್ಪ ಅದನ್ನು ಅಂಗೀಕರಿಸಿರಲಿಲ್ಲ. ರಾಜ್ಯೋತ್ಸವ ಪ್ರಶಸ್ತಿ ಏಕಲವ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮಗಳು ಮುಗಿದ ನಂತರದಲ್ಲಿ ಅವರ ರಾಜೀನಾಮೆ ಅಂಗೀಕರಿಸಲಾಗಿದೆ. ಸಿಎಂ ಈ ಬಗ್ಗೆ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದು, ರಾಜೀನಾಮೆ ಅಂಗೀಕರಿಸಲಾಗಿದೆ ಎಂದು ಹೇಳಲಾಗಿದೆ.