BIG NEWS: ಒಬ್ಬರಿಂದ ಕಿತ್ತುಕೊಂಡು ಮತ್ತೊಬ್ಬರಿಗೆ ಕೊಡುವ ಕೆಲಸ; ಉಚಿತ ಯೋಜನೆ ಹೆಸರಲ್ಲಿ ಜನರಿಗೆ ಮೋಸ; ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಮಂಡ್ಯ: ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ವಿದ್ಯುತ್ ಕೊರತೆಯಾಗಲಿದ್ದು, ರಾಜ್ಯವನ್ನು ಕಗ್ಗತ್ತಲಲ್ಲಿ ಮುಳುಗಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಬಿಜೆಪಿ ಮಾಜಿ ಶಾಸಕ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದರು. ಸರ್ಕಾರದಿಂದ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಆದರೆ ಮಧ್ಯಮ ವರ್ಗದವರಿಗೆ ಡಬಲ್ ಬಿಲ್ ಬರುತ್ತಿದೆ. ಇದರಿಂದ ಸಣ್ಣ, ಮಧ್ಯಮ ಕೈಗಾರಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. ಒಬ್ಬರಿಂದ ಕಿತ್ತುಕೊಂಡು ಮತ್ತೊಬ್ಬರಿಗೆ ಕೊಡುವ ಕೆಲಸವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉಚಿತ ಯೋಜನೆಗಳ ಹೆಸರಲ್ಲಿ ಸರ್ಕಾರ ಜನರಿಗೆ ಮೋಸ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಗಾಗಿ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಜನರು ಇನ್ನಷ್ಟು ಸಂಕಷ್ಟ ಎದುರಿಸಬೇಕಾದ ಸ್ಥಿತಿ ಬಂದಿದೆ ಎಂದು ಗುಡುಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read