alex Certify BIG NEWS: ಮಸಾಲೆ ಅರೆಯೋದು ನಮಗೂ ಗೊತ್ತಿದೆ; ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಟಾಂಗ್ ನೀಡಿದ ಸಿ.ಟಿ.ರವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಸಾಲೆ ಅರೆಯೋದು ನಮಗೂ ಗೊತ್ತಿದೆ; ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಟಾಂಗ್ ನೀಡಿದ ಸಿ.ಟಿ.ರವಿ

ಬೆಂಗಳೂರು: ‘ಆಪರೇಷನ್ ಹಸ್ತ’ ವಿಚಾರವಾಗಿ ಮಾತನಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್, ಕೋಳಿ ಕೇಳಿ ಯಾರೂ ಮಸಾಲೆ ಅರೆಯಲ್ಲ ಎಂದು ಹೇಳುವ ಮೂಲಕ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ್ದರು. ಡಿ.ಕೆ.ಶಿವಕುಮಾರ್ ಹೇಳಿಕೆಗೆ ಇದೀಗ ಮಾಜಿ ಶಾಸಕ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಯಾರೂ ಕೂಡ ಕೋಳಿ ಕೇಳಿ ಮಸಾಲೆ ಅರೆಯಲ್ಲ ಎಂಬುದು ಎಲ್ಲರಿಗೂ ಗೊತ್ತು. ಆದರೆ ಮಸಾಲೆ ಅರೆಯುವುದು ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರ ಗೊತ್ತಿರುವ ವಿದ್ಯೆಯಲ್ಲ. ಮಸಾಲೆ ಅರೆಯೋಕೆ ನಮಗೂ ಗೊತ್ತು. ನಾವೂ ಚನ್ನಾಗಿಯೇ ಅರೆಯುತ್ತೇವೆ ಎಂದು ಹೇಳಿದ್ದಾರೆ.

ಮಲೆನಾಡಿನ ಅಡುಗೆ ತಿಂದವರಿಗೆ ಗೊತ್ತು. ಖಾರ ಹೇಗಿರುತ್ತೆ ಎಂಬುದು ಎಂದು ತಿರುಗೇಟು ನೀಡಿದ್ದಾರೆ. ಯಾರೂ ಕೂಡ ಕಾಂಗ್ರೆಸ್ ಗೆ ಹೋಗುತ್ತಿಲ್ಲ. ಬಿಜೆಪಿಯನ್ನು ಕಟ್ಟಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಕಾರ್ಯಕರ್ತರ ಮೇಲಿದೆ. ಹಾಗಾಗಿ ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಸೇರುತ್ತಾರೆ ಎಂಬುದು ಕೇವಲ ವದಂತಿ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...