alex Certify BIG NEWS: ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ; ಕ್ಯಾಬ್ ಚಾಲಕನನ್ನು ಕಟ್ಟಿ ಹಾಕಿ ಥಳಿಸಿದ ಗ್ರಾಮಸ್ಥರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ; ಕ್ಯಾಬ್ ಚಾಲಕನನ್ನು ಕಟ್ಟಿ ಹಾಕಿ ಥಳಿಸಿದ ಗ್ರಾಮಸ್ಥರು

ಚಿಕ್ಕಮಗಳೂರು: ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಕ್ಯಾಬ್ ಚಾಲಕನ್ನು ಹಿಡಿದು ಕಂಬಕ್ಕೆ ಕಟ್ಟಿ ಹಾಕಿ ಗ್ರಾಮಸ್ಥರು ಥಳಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ.

ಕ್ಯಾಬ್ ಚಾಲಕ ರಾಜಪ್ಪ ವಿರುದ್ಧ ಪೋಕ್ಸೋ ಪ್ರಕರಣವನ್ನು ದಾಖಲಿಸಲಾಗಿದೆ. ಕ್ಯಾಬ್ ಚಾಲಕ ರಾಜಪ್ಪ ಕಡೂರಿನ ಶಾಲೆಯಿಂದ ಶಿಕ್ಷಕಿಯರನ್ನು ಕರೆತರುತ್ತಿದ್ದ. ಇದೇ ಕಾರಣಕ್ಕೆ ಬೆಳಿಗ್ಗೆಯಿಂದ ಸಂಜೆವರೆಗೂ ಶಾಲೆಯ ಬಳಿಯೇ ಇರುತ್ತಿದ್ದ. ಈ ವೇಳೆ ಶಾಲಾ ಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸಿದ್ದ.

ವಿಷಯ ಗೊತ್ತಾಗುತ್ತಿದ್ದಂತೆ ಗ್ರಾಮಸ್ಥರು ಕ್ಯಾಬ್ ಚಾಲಕ ರಾಜಪ್ಪನನ್ನು ಹಿಡಿದು ಕಂಬಕ್ಕೆ ಕಟ್ಟಿಹಾಕಿ ಥಳಿಸಿದ್ದಾರೆ. ಅಲ್ಲದೇ ಪೊಲೀಸರಿಗೆ ಹಿಡಿದು ಕೊಟ್ಟಿದ್ದು, ಆರೋಪಿ ವಿರುದ್ಧ ಪೋಕ್ಸೋ ಪ್ರಕರಣವನ್ನು ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...