ಬೆಂಗಳೂರು: ಆಧುನಿಕ ತಂತ್ರಜ್ಞಾನಗಳಲ್ಲಿ ಜಾಗತಿಕ ಸ್ಪರ್ಧಾತ್ಮಕತೆಗಾಗಿ ಕೌಶಲ ತರಬೇತಿ ನೀಡುವ ʼನಿಪುಣ ಕರ್ನಾಟಕʼ ಯೋಜನೆ ಆರಂಭಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಈ ಯೋಜನೆಯನ್ನು 100 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು. 2024-25ನೇ ಸಾಲಿನಲ್ಲಿ ಈ ಯೋಜನೆಯನ್ನು 10 ಕೋಟಿ ರೂ. ವೆಚ್ಚದಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡಲಾಗುವುದು. ಈ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಉದಯೋನ್ಮುಖ ತಂತ್ರಜ್ಞಾನಗಳ ಕ್ಷೇತ್ರದ ಕೈಗಾರಿಕೆಗಳ ಬೇಡಿಕೆಗಳನ್ನು ಈಡೇರಿಸಲು ಮತ್ತು ಕರ್ನಾಟಕದ ಯುವಕರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗವಕಾಶ ಕಲ್ಪಿಸುವ ಉದ್ದೇಶದಿಂದ ಕೌಶಲ ಮತ್ತು ಪುನರ್ ಕೌಶಲ ಹಾಗೂ ವೃತ್ತಿಪರ ತರಬೇತಿ ನೀಡಲಾಗುವುದು ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.