alex Certify ಬಡವರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ: 5 ತಿಂಗಳು ಉಚಿತ ರೇಷನ್ ವಿತರಣೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಡವರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ: 5 ತಿಂಗಳು ಉಚಿತ ರೇಷನ್ ವಿತರಣೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ

ನವದೆಹಲಿ: 80 ಕೋಟಿ ಬಡವರಿಗೆ ಉಚಿತವಾಗಿ ಆಹಾರಧಾನ್ಯ ವಿತರಿಸುವುದಾಗಿ ಈಗಾಗಲೇ ಘೋಷಿಸಲಾಗಿದ್ದು ಈಗ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿಯೂ ಒಪ್ಪಿಗೆ ನೀಡಲಾಗಿದೆ.

ಕೊರೋನಾ ಕಾರಣದಿಂದಾಗಿ ಸಂಕಷ್ಟಕ್ಕೆ ಸಿಲುಕಿದ ಬಡವರಿಗೆ ಉಚಿತವಾಗಿ ಪಡಿತರ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದು, ಅವಧಿಯನ್ನು ದೀಪಾವಳಿಯವರೆಗೆ 5 ತಿಂಗಳು ವಿಸ್ತರಿಸಲಾಗಿದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ನವಂಬರ್ ಅಂತ್ಯದವರೆಗೆ 80 ಕೋಟಿ ಬಡ ಜನರಿಗೆ ಉಚಿತವಾಗಿ ಪಡಿತರ ವಿತರಿಸುವ ಪ್ರಸ್ತಾವನೆಗೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ.

ಈ ಮೊದಲು ಜೂನ್ ಅಂತ್ಯದವರೆಗೆ ಉಚಿತವಾಗಿ ಪಡಿತರ ನೀಡಲು ನಿರ್ಧರಿಸಲಾಗಿತ್ತು. ಅದನ್ನು 5 ತಿಂಗಳ ಕಾಲ ವಿಸ್ತರಿಸುವುದಾಗಿ ಪ್ರಧಾನಿ ಘೋಷಿಸಿದ್ದು, ಕ್ಯಾಬಿನೆಟ್ ನಲ್ಲಿಯೂ ಅಂಗೀಕಾರ ದೊರೆತಿದೆ. ಆಹಾರ ಭದ್ರತಾ ಕಾಯ್ದೆಯಡಿ ಬರುವ  ಪ್ರತಿ ಕುಟುಂಬದವರಿಗೆ ಉಚಿತವಾಗಿ ಪಡಿತರ ನೀಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...