ಕೊರೋನಾ ಕಾಲದಲ್ಲಿ ಅತಿದೊಡ್ಡ ರಾಜಕೀಯ ಬೆಳವಣಿಗೆ ನಡೆದಿದ್ದು, ನಾಯಕತ್ವ ಬದಲಾವಣೆ ಕೂಗಿನ ಮಧ್ಯೆ ಹೈಕಮಾಂಡ್ ಬಿಗ್ ಶಾಕ್ ನೀಡಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಚಿವ ಸಂಪುಟಕ್ಕೆ ಸರ್ಜರಿ ಮಾಡಲಾಗುವುದು ಎನ್ನಲಾಗಿದೆ.
ಸ್ವತಃ ಅಖಾಡಕ್ಕಿಳಿದಿರುವ ಬಿಜೆಪಿ ಹೈಕಮಾಂಡ್ ಆಡಳಿತಕ್ಕೆ ಚುರುಕು ನೀಡಲು ಮುಂದಾಗಿದೆ. ಸಂಪುಟ ಬದಲಾವಣೆಗೆ ಬಿಜೆಪಿ ಹೈಕಮಾಂಡ್ ಕೈಹಾಕಿದ್ದು, ಬಹುತೇಕ ಸಚಿವರಿಗೆ ಗೇಟ್ ಫಾಸ್ ನೀಡುವ ಸಾಧ್ಯತೆ ಇದೆ. ಹಿರಿಯ ಸಚಿವರಿಗೆ ಪಕ್ಷದ ಹೊಣೆಗಾರಿಕೆ ವಹಿಸಲಾಗುವುದು. ಎರಡನೇ ತಲೆಮಾರಿನ ನಾಯಕರಿಗೆ ಮನ್ನಣೆ ನೀಡಲಾಗುತ್ತದೆ. ಮುಂದಿನ ತಿಂಗಳು ಸಂಪುಟ ಸರ್ಜರಿಗೆ ಮುಹೂರ್ತ ನಿಗದಿಯಾಗುವ ಸಾಧ್ಯತೆ ಇದ್ದು, ಸಕ್ರಿಯರಲ್ಲದ ಸಚಿವರಿಗೆ ಗೇಟ್ ಪಾಸ್ ನೀಡಲು ಹೈಕಮಾಂಡ್ ಭರದ ಸಿದ್ಧತೆ ನಡೆಸಿದೆ.
ಇದೇ ವೇಳೆ ಬಿಜೆಪಿಯದಲ್ಲಿ ಕೂಡ ಮೇಜರ್ ಸರ್ಜರಿ ಮಾಡಲದಿದ್ದು, ಪ್ರಮುಖ ಪದಾಧಿಕಾರಿಗಳನ್ನು ಕೂಡ ಬದಲಾವಣೆ ಮಾಡಲಾಗುವುದು. ಪಕ್ಷವನ್ನು ಮತ್ತಷ್ಟು ಬಲಪಡಿಸಲು ಬಿಜೆಪಿ ಹೈಕಮಾಂಡ್ ಮಹತ್ವದ ತೀರ್ಮಾನ ಕೈಗೊಂಡಿದೆ.
ಯಡಿಯೂರಪ್ಪ ನಾಯಕತ್ವದಲ್ಲಿ ಬದಲಾವಣೆ ಇರುವುದಿಲ್ಲ. ಸದ್ಯಕ್ಕೆ ಯಡಿಯೂರಪ್ಪ ಸೇಫ್ ಆಗಿದ್ದಾರೆ. ಯಡಿಯೂರಪ್ಪ ಬದಲಾವಣೆ ವಿಷಯವನ್ನು ಬಿಜೆಪಿ ಹೈಕಮಾಂಡ್ ಕೈಬಿಟ್ಟಿದೆ. ಪಕ್ಷದಲ್ಲಿ ಬದಲಾವಣೆಯಾಗಬಹುದು. ಯಡಿಯೂರಪ್ಪ ಬದಲಾವಣೆಯಿಲ್ಲದೇ ಆಡಳಿತಕ್ಕೆ ಚುರುಕು ನೀಡಲು ಸಂಪುಟಕ್ಕೆ ಮೇಜರ್ ಸರ್ಜರಿ ಮಾಡಲಾಗುತ್ತದೆ ಎಂದು ಹೇಳಲಾಗಿದೆ.