ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದೆಹಲಿಗೆ ತೆರಳುವ ಸಾಧ್ಯತೆ ಇದೆ. ನಾಳೆ ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ಸಿಎಂ ಚರ್ಚೆ ನಡೆಸಲಿದ್ದಾರೆ.
ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಾಗಿ ವರಿಷ್ಠರ ಜೊತೆಗೆ ಅವರು ಚರ್ಚೆ ನಡೆಸಲಿದ್ದು, ಹೈಕಮಾಂಡ್ ಒಪ್ಪಿಗೆ ನೀಡಿದಲ್ಲಿ ಇದೇ ತಿಂಗಳು ಸಂಪುಟ ವಿಸ್ತರಣೆ ಮಾಡಲಿದ್ದಾರೆ. ಚುನಾವಣೆ ಸಮೀಪದಲ್ಲಿರುವುದರಿಂದ ಸಚಿವ ಸಂಪುಟ ವಿಸ್ತರಣೆ ಮಾಡಲು ಪ್ರಕ್ರಿಯೆ ಆರಂಭಿಸಲಾಗಿದೆ. ಖಾಲಿ ಇರುವ ಸ್ಥಾನಗಳಿಗೆ ನೂತನ ಸಚಿವರನ್ನು ನೇಮಕ ಮಾಡಲಾಗುವುದು ಎಂದು ಹೇಳಲಾಗಿದೆ.