ಬೆಂಗಳೂರು: ಉಪಚುನಾವಣೆ ಮುಗಿಯುತಿದ್ದಂತೆ ಆಡಳಿತಕ್ಕೆ ಚುರುಕು ನೀಡಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸಚಿವ ಸಂಪುಟ ಪುನರ್ ರಚನೆಗೆ ಚಿಂತನೆ ನಡೆಸಿದ್ದಾರೆ.
ಡಿಸೆಂಬರ್ ನಲ್ಲಿ ಸಂಪುಟ ಪುನಾರಚನೆ, ಆಡಳಿತ ಯಂತ್ರದಲ್ಲಿ ಬಾರಿ ಬದಲಾವಣೆ ಮಾಡುವ ಸಾಧ್ಯತೆ ಇದೆ. ನಿಷ್ಕ್ರಿಯ ಮತ್ತು ಭ್ರಷ್ಟಾಚಾರ ಆರೋಪ ಹೊತ್ತ 6-7 ಸಚಿವರನ್ನು ಬದಲಾವಣೆ ಮಾಡುವ ಸಾಧ್ಯತೆ ಇದೆ. ತೀವ್ರ ಭ್ರಷ್ಟಾಚಾರ ಆರೋಪಕ್ಕೆ ಗುರಿಯಾಗಿರುವ ಮತ್ತು ನಿಷ್ತ್ರೀಯ ಆರೋಪ ಹೊತ್ತ ಕೆಲವು ಸಚಿವರನ್ನು ಕೈ ಬಿಟ್ಟು ಹೊಸಬರಿಗೆ ಅವಕಾಶ ನೀಡುವ ಸಾಧ್ಯತೆ ಇದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಸ್ಥಾನ ಕಳೆದುಕೊಂಡಿರುವ ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡುವ ಸುಳಿವನ್ನು ಸಿಎಂ ನೀಡಿದ್ದಾರೆ. ಹೆಚ್.ಡಿ. ಕೋಟೆಯ ಕಾರ್ಯಕ್ರಮದಲ್ಲಿ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಬೇಕು ಎಂದು ಮುಖಂಡರು ಹೇಳಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ಅನಿಲ್ ಚಿಕ್ಕಮಾದು ಅವರಿಗೆ ಸ್ಥಾನ ನೀಡಲು ಸಾಧ್ಯವಿಲ್ಲ. ಸುಮ್ಮನೆ ಸುಳ್ಳು ಹೇಳುವುದಿಲ್ಲ. ಆದರೆ, ನಾಗೇಂದ್ರ ಅವರಿಗೆ ಸಚಿವ ಸ್ಥಾನ ಕೊಡಬೇಕು, ಕೊಡ್ತೀನಿ ಎಂದು ಹೇಳಿದ್ದಾರೆ.