
ಬೆಂಗಳೂರು: ವರಿಷ್ಠರ ಒಪ್ಪಿಗೆ ಪಡೆದು ನವೆಂಬರ್ 11 ರ ನಂತರ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ 10 ರಂದು ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಹಾಗೂ ಶಿಕ್ಷಕರು, ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟವಾಗಲಿವೆ. ಫಲಿತಾಂಶದ ಬಳಿಕ ಪಕ್ಷದ ವರಿಷ್ಠರನ್ನು ಸಂಪರ್ಕಿಸಿ ಸಂಪುಟ ವಿಸ್ತರಣೆಗೆ ಅನುಮತಿ ಪಡೆಯಲಿದ್ದೇನೆ ಎಂದು ಹೇಳಿದ್ದಾರೆ.
ವರಿಷ್ಠರು ಒಪ್ಪಿದಲ್ಲಿ ನವೆಂಬರ್ 11 ರಂದು ದೆಹಲಿಗೆ ಹೋಗಿ ಬಂದು ಸಂಪುಟ ವಿಸ್ತರಿಸಲಾಗುವುದು. ಉಪ ಚುನಾವಣೆ ಹಾಗೂ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.