ಬೆಂಗಳೂರು: ಮಂತ್ರಿಗಿರಿ ಮೂಡ್ ನಲ್ಲಿದ್ದ ಬಿಜೆಪಿ ಶಾಸಕರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಸಚಿವ ಸಂಪುಟ ವಿಸ್ತರಣೆ, ಪುನಾರಚನೆಗೆ ಕಾಯುತ್ತಿದ್ದವರು ಇನ್ನೂ ಕೆಲವು ದಿನದವರೆಗೆ ಕಾಯಲೇಬೇಕಿದೆ.
ರಾಜ್ಯದಲ್ಲಿ ಸಂಪುಟ ವಿಸ್ತರಣೆ, ಪುನಾರಚನೆ ಸಿಎಂ ಪರಮಾಧಿಕಾರ. ಅವರೇ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮತ್ತು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಆದರೆ, ಈ ವರ್ಷ ಸಂಪುಟ ವಿಸ್ತರಣೆ ಡೌಟ್ ಎನ್ನಲಾಗಿದೆ. ಮುಂದಿನ ವರ್ಷ ಸಂಪುಟ ವಿಸ್ತರಣೆ ಮಾಡಲಾಗುವುದು. ಸಂಕ್ರಾಂತಿ ಹಬ್ಬ ಮುಗಿದ ನಂತರವೇ ಸಂಪುಟ ವಿಸ್ತರಣೆ ನಡೆಯಲಿದೆ. ಬಿಜೆಪಿಯಲ್ಲಿನ ಸದ್ಯದ ಬೆಳವಣಿಗೆ ಪ್ರಕಾರ ಸಂಪುಟ ಸರ್ಕಸ್ ಗೆ ಬ್ರೇಕ್ ಹಾಕಲಾಗಿದೆ.
ವಿಧಾನ ಮಂಡಲ ಅಧಿವೇಶನ ಮತ್ತು ಗ್ರಾಮ ಪಂಚಾಯಿತಿ ಚುನಾವಣೆ ಕಾರಣಕ್ಕೆ ಸಂಪುಟ ವಿಸ್ತರಣೆ ಮುಂದೂಡಿಕೆಯಾಗಲಿದೆ. ಅಧಿವೇಶನಕ್ಕೂ ಮೊದಲೇ ಸಚಿವ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒಲವು ತೋರಿದ್ದರು. ಆದರೆ. ವರಿಷ್ಠರಿಂದ ಹಸಿರು ನಿಶಾನೆ ಸಿಕ್ಕಿಲ್ಲ. ಸೋಮವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಗ್ರಾಮ ಪಂಚಾಯಿತಿ ಚುನಾವಣೆ ಕೂಡ ನಡೆಯುತ್ತಿದೆ. ಹಾಗಾಗಿ ಸಂಕ್ರಾಂತಿ ಮುಗಿದ ಬಳಿಕ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.