alex Certify ಸಂಪುಟಕ್ಕೆ ಸಿಗದ ಗ್ರೀನ್ ಸಿಗ್ನಲ್: ದೆಹಲಿಗೆ ಹೋಗಿ ಬರಿಗೈಲಿ ಬಂದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಪುಟಕ್ಕೆ ಸಿಗದ ಗ್ರೀನ್ ಸಿಗ್ನಲ್: ದೆಹಲಿಗೆ ಹೋಗಿ ಬರಿಗೈಲಿ ಬಂದ ಸಿಎಂ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬರಿಗೈಯಲ್ಲಿ ವಾಪಸ್ಸಾಗಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾದ ಸಿಎಂ, ಹೋದ ವೇಗದಲ್ಲೇ ರಾಜ್ಯಕ್ಕೆ ವಾಪಸಾಗಿದ್ದಾರೆ. ಸಚಿವ ಸಂಪುಟ ವಿಸ್ತರಣೆಯೋ? ಪುನರ್ ರಚನೆಯೇ ಎನ್ನುವುದು ಇನ್ನೂ ನಿಗದಿಯಾಗಿಲ್ಲ.

ನಡ್ಡಾ ಭೇಟಿಯ ಬಳಿಕ ಮಾತನಾಡಿದ ಸಿಎಂ, ಮೂರು ನಾಲ್ಕು ದಿನದಲ್ಲಿ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಅಮಿತ್ ಶಾ ಮತ್ತಿತರ ನಾಯಕರ ಭೇಟಿಗೆ ಅವರಿಗೆ ಅವಕಾಶ ಸಿಕ್ಕಿಲ್ಲ. ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆಗೆ ವರಿಷ್ಠರ ಒಪ್ಪಿಗೆ ಸಿಕ್ಕಿಲ್ಲವೆಂದು ಹೇಳಲಾಗಿದೆ. ಹೀಗಾಗಿ ಸಂಪುಟ ವಿಸ್ತರಣೆ ಸದ್ಯಕ್ಕೆ ನಡೆಯುವ ಸಾಧ್ಯತೆ ಇಲ್ಲ. ಮತ್ತಷ್ಟು ವಿಳಂಬವಾಗಬಹುದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...