ಬೆಂಗಳೂರು: ಬಹುದಿನಗಳ ಬೇಡಿಕೆಯಾಗಿರುವ ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ, ಹುಬ್ಬಳ್ಳಿ ಮಹಾನಗರ ಪಾಲಿಕೆ ರಚಿಸುವ ಕುರಿತು ಇಂದು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ದಶಕದಿಂದಲೂ ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ವಿಭಜನೆ ಮಾಡಬೇಕೆಂಬ ಒತ್ತಾಯವಿದೆ. ಧಾರವಾಡ ಜನಸಂಖ್ಯೆ 6.5 ಲಕ್ಷ ದಾಟಿದೆ. ಪ್ರತ್ಯೇಕ ಪಾಲಿಕೆ ರಚಿಸಬೇಕೆಂದು ಕಾಂಗ್ರೆಸ್, ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.