ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಪಕ್ಷದ ಹಿರಿಯ ನಾಯಕರಾದ ಅಮಿತ್ ಶಾ, ಬಿ.ಎಲ್. ಸಂತೋಷ್ ಜೊತೆ ಶನಿವಾರ ಹಾಗೂ ಭಾನುವಾರ ಗೌಪ್ಯ ಮಾತುಕತೆ ನಡೆಸಿದ್ದು ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಪ್ರಸ್ತುತ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿರುವ ಬಿ.ಎಲ್. ಸಂತೋಷ್ 8 ವರ್ಷಗಳ ಕಾಲ ಕರ್ನಾಟಕದಲ್ಲಿ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಕೇಂದ್ರ ಗೃಹ ಸಚಿವರಾಗಿರುವ ಅಮಿತ್ ಶಾ 2014 ರಿಂದ 2020ರವರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.
ಮೂಲಗಳ ಮಾಹಿತಿಯ ಪ್ರಕಾರ ಪ್ರಧಾನಿ ಮೋದಿ ಈ ವಾರ ತಮ್ಮ ಕ್ಯಾಬಿನೆಟ್ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬಗ್ಗೆ ಗೌಪ್ಯ ಮಾತುಕತೆ ನಡೆಸಿರುವ ಈ ಮೂವರು ಕೆಲವೊಂದಿಷ್ಟು ಸಂಸದರ ಹೆಸರನ್ನ ಗಣನೆಗೆ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗ್ತಿದೆ.
2019ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಮೋದಿ ಸರ್ಕಾರ ಮಾಡುತ್ತಿರುವ ಮೊದಲ ಕ್ಯಾಬಿನೆಟ್ ವಿಸ್ತರಣೆ ಇದಾಗಿರಲಿದೆ. ಭಾನುವಾರ ಸಂಜೆ 5 ಗಂಟೆಗೆ ಆರಂಭವಾದ ಸಭೆ ಸುದೀರ್ಘ ಆರು ಗಂಟೆಗಳ ಕಾಲ ನಡೆದಿದೆ ಎನ್ನಲಾಗಿದೆ. ಹಾಗೂ ಶನಿವಾರ ಕೂಡ ತಡರಾತ್ರಿಯವರೆಗೂ ಚರ್ಚೆ ನಡೆದಿತ್ತು ಎಂದು ವರದಿಗಳು ತಿಳಿಸಿವೆ.