
ಬೆಳಗಾವಿ: ಸಂಪುಟ ವಿಸ್ತರಣೆ ಮಾಡುವುದಾದರೆ ಬೇಗನೆ ಮಾಡಲಿ ಎನ್ನುವ ಶಾಸಕರ ಹೇಳಿಕೆಗೆ ಸಂಬಂಧಿಸಿದಂತೆ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರಿಷ್ಠರು ಪಂಚರಾಜ್ಯ ಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆ. ಈ ವಿಚಾರವನ್ನು ಈಗಾಗಲೇ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. ಪಂಚರಾಜ್ಯಗಳ ಚುನಾವಣೆ ಮುಗಿದ ತಕ್ಷಣ ಸಂಪುಟ ವಿಸ್ತರಣೆಯಾಗಬಹುದು ಎಂದು ತಿಳಿಸಿದ್ದಾರೆ.
ಸಂಪುಟ ವಿಸ್ತರಣೆ ಮಾಡುವುದಾದರೆ ಈಗಲೇ ಮಾಡಿ. ಮೂರು ತಿಂಗಳ ನಂತರ ಬೇಡ, ಆ ವೇಳೆಗೆ ಮಾಡುವುದಾದರೆ ಸಂಪುಟ ವಿಸ್ತರಣೆ ಬೇಡವೆಂದು ಕೆಲವು ಶಾಸಕರು ಅಭಿಪ್ರಾಯ ವ್ಯಕ್ತಪಡಿಸುವುದಕ್ಕೆ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯೆ ನೀಡಿ, ಪಂಚರಾಜ್ಯಗಳ ಚುನಾವಣೆ ಮುಗಿದ ನಂತರ ಸಂಪುಟ ವಿಸ್ತರಣೆಯಾಗಬಹುದು ಎಂದು ಹೇಳಿದ್ದಾರೆ.