
ಬೆಂಗಳೂರು: ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹೆಚ್. ನಾಗೇಶ್ ಅವರನ್ನು ನೇಮಕ ಮಾಡಲಾಗಿದೆ. ಹೆಚ್. ನಾಗೇಶ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ಅಬಕಾರಿ ಸಚಿವರಾಗಿದ್ದ ಅವರು ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಿಎಂ ಸೂಚನೆಯಂತೆ ರಾಜೀನಾಮೆ ನೀಡಿದ್ದ ಅವರಿಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನದೊಂದಿಗೆ ಸಂಪುಟ ದರ್ಜೆ ಸ್ಥಾನ ಕಲ್ಪಿಸಲಾಗಿದೆ.