ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದ್ದ ಬೆನ್ನಲ್ಲೇ ಸದ್ಯಕ್ಕೆ ಸಂಪುಟ ವಿಸ್ತರಣೆ ಇಲ್ಲ ಎಂದು ತಿಳಿದುಬಂದಿದೆ.
ರಾಜ್ಯ ಸಚಿವ ಸಂಪುಟ ಪುನಾರಚನೆ ಬದಲು ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡುವಂತೆ ಕಾಂಗ್ರೆಸ್ ಹೈಕಮಾಂಡ್, ರಾಜ್ಯ ನಾಯಕರಿಗೆ ಸೂಚನೆ ನೀಡಿದೆ.
ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೈಕಮಾಂಡ್ ನಾಯಕರ ಜೊತೆ ಸಭೆ ನಡೆಸಿದ್ದು, ಸಭೆಯಲ್ಲಿ ಸಂಪುಟ ಪುನಾರಚನೆಗೆ ಹೈಕಮಾಂಡ್ ನಾಯಕರು ಒಪ್ಪಿಲ್ಲ ಎನ್ನಲಾಗಿದೆ. ಸದ್ಯಕ್ಕೆ ಸಂಪುಟ ಪುನಾರಚನೆ ಬೇಡ. ಆದರೆ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಡಲು ಹೈಕಾಂಡ್ ಒಪ್ಪಿಗೆ ಸೂಚಿಸಿದೆ.
ಕೆಲ ಸಚಿವರು ತಮ್ಮ ಖಾತೆ ನಿಭಾಯಿಸಲು ವಿಫಲರಾಗಿದ್ದು, ಅಂತವರ ಖಾತೆಗಳನ್ನು ಬದಲಾವಣೆ ಮಾಡುವ ಬಗ್ಗೆಯೂ ಸೂಚನೆ ನೀಡಿದೆ. ಇನ್ನು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಡಲು ಹೈಕಮಾಂಡ್ ನಿರುತ್ಸಾಹ ತೋರಿದೆ. ಈ ಹಂತದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ತಪ್ಪು ಸಂದೇಶ ರವಾನಿಸಿದಂತಾಗುವ ಸಾಧ್ಯತೆ ಇದೆ. ಹಾಗಾಗಿ ಅಧ್ಯಕ್ಷರ ಬದಲಾವಣೆಯೂ ಸದ್ಯಕ್ಕೆ ಬೇಡ ಎಂದು ತಿಳಿಸಿದೆ ಎಂದು ತಿಳಿದುಬಂದಿದೆ.