ಬೆಂಗಳೂರು: ಆಗಸ್ಟ್ ಮೊದಲ ವಾರ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿ, ಸಿ.ಪಿ. ಯೋಗೇಶ್ವರ್, ದತ್ತಾತ್ರೇಯ ಪಾಟೀಲ್ ರೇವೂರ್ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಮತ್ತೆ ಪ್ರಕ್ರಿಯೆಗಳು ಆರಂಭವಾಗಿವೆ. ಐದು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು, ಇವುಗಳಲ್ಲಿ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡಿ ಒಂದು ಸ್ಥಾನ ಖಾಲಿ ಉಳಿಸಿಕೊಳ್ಳಲಾಗುವುದು. ಸಂಪುಟಕ್ಕೆ ಕೆ.ಎಸ್. ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿ ಮತ್ತೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.