ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ ಶಿಂಧೆ ಬಣ ಮತ್ತು ಬಿಜೆಪಿ ಮೈತ್ರಿಕೂಟ ಸರ್ಕಾರದ ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಇಂದು ನಡೆಯಲಿದೆ.
14 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಪುಟದಲ್ಲಿ ಶಿಂಧೆ ಬಣಕ್ಕೆ 7 ಸ್ಥಾನ ಹಾಗೂ ಬಿಜೆಪಿಗೆ 7 ಸ್ಥಾನ ನಿಗದಿ ಮಾಡಲಾಗಿದ್ದು, ಇಂದು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವರು. ಸರ್ಕಾರ ರಚನೆಯಾಗಿ 40 ದಿನ ಕಳೆದರೂ ಸಚಿವ ಸಂಪುಟ ವಿಸ್ತರಣೆಯಾಗಿರಲಿಲ್ಲ.
ಶಿವಸೇನೆ ಬಂಡಾಯ ಶಾಸಕರ ಜೊತೆಗೆ ಸೇರಿ ಬಿಜೆಪಿ ಸರ್ಕಾರ ರಚಿಸಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಂಪುಟ ವಿಸ್ತರಣೆಗೆ ಕಸರತ್ತು ನಡೆಸಿದ್ದರು. ಈಗ ಕಾಲ ಕೂಡಿ ಬಂದಿದ್ದು, 14 ಶಾಸಕರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.