![](https://kannadadunia.com/wp-content/uploads/2021/04/vidhana-soudha-1-800x445-1.jpg)
ಬೆಂಗಳೂರು: ರಾಜ್ಯದ ವಿವಿಧ ದೇವಸ್ಥಾನಗಳ ಪ್ರಾಧಿಕಾರ ರಚನೆಗೆ ಇಂದು ನಡೆದ ಸಂಪುಟ ಸಭೆ ಅನುಮೋದನೆ ನೀಡಿದೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ, ಹುಲಿಯೂರುದುರ್ಗ ದೇವಸ್ಥಾನ ಪ್ರಾದಿಕಾರ ರಚನೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ.
ಮುಜರಾಯಿ ಇಲಾಖೆ ದೇವಸ್ಥಾನ ಸಮಿತಿಗಳಲ್ಲಿ ವಿಶ್ವಕರ್ಮ ಸಮುದಾಯದ ಪ್ರತಿನಿಧಿಗಳಿಗೆ ಪ್ರಾತಿನಿಧ್ಯ ನೀಡಲು ಒಪ್ಪಿಗೆ ಸೂಚಿಸಲಾಗಿದೆ.