ಬೆಂಗಳೂರು : ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಹಲವು ಮಹತ್ವದ ನಿರ್ಧಾರಗಳ ಘೋಷಣೆ ಮಾಡುವ ಸಾಧ್ಯತೆ ಇದೆ.
ಇಂದು ಮಧ್ಯಾಹ್ನ 3:00 ಗಂಟೆಗೆ ಸಚಿವ ಸಂಪುಟದ 2023ನೇ ಸಾಲಿನ 11 ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.
ಡಿಸೆಂಬರ್ 4 ರಿಂದ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಹೇಳಲಾಗುತ್ತಿದ್ದು, ಈ ಕುರಿತು ಸಚಿವ ಸಂಪುಟದಲ್ಲಿ ಚರ್ಚೆ ನಡೆಸುವ ಸಾಧ್ಯತೆಗಳಿವೆ ಮೂಲಗಳು ತಿಳಿಸಿವೆ. ಡಿಸೆಂಬರ್ 3 ರಂದು ಪಂಚ ರಾಜ್ಯಗಳ ವಿಧಾನಸಬೆ ಚುನಾವಣೆಯ ಫಲಿತಾಂಶಗಳು ಹೊರಬಿದ್ದ ಬೆನ್ನಲ್ಲೇ ಡಿಸೆಂಬರ್ 4 ರಿಂದ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಸುವ ಬಗ್ಗೆ ಚರ್ಚೆ ನಡೆಯಲಿದೆ.
ಲೋಕಸಭೆ ಚುನಾವಣೆ, ವಿಪಕ್ಷಗಳ ಟೀಕೆ, ಅನುದಾನ ಬಿಡುಗಡೆ ಸೇರಿದಂತೆ ಗ್ಯಾರಂಟಿ ಯೋಜನೆಗಳ ಬಗ್ಗೆ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದ್ದು, ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಮಂತ್ರಿಮಂಡಲದ ಸಚಿವರು, ಶಾಸಕರು, ಅಧಿಕಾರಿಗಳು ಹಾಜರಿರಲಿದ್ದಾರೆ.