alex Certify ಕಾಂಗ್ರೆಸ್ ಶಾಸಕರಿಗೆ ಭರ್ಜರಿ ಕೊಡುಗೆ: ತಲಾ 25 ಕೋಟಿ ರೂ. ಅನುದಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಶಾಸಕರಿಗೆ ಭರ್ಜರಿ ಕೊಡುಗೆ: ತಲಾ 25 ಕೋಟಿ ರೂ. ಅನುದಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ 9 ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ತಲಾ 25 ಕೋಟಿ ರೂ. ಭರ್ಜರಿ ಅನುದಾನ ನೀಡಲು ಅನುಮೋದನೆ ದೊರೆತಿದೆ.

ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಕೈಗೊಳ್ಳಲಾಗುವ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾ ಯೋಜನೆಗಳಿಗೆ ತಲಾ 25 ಕೋಟಿ ರೂ. ಅನುದಾನ ನೀಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಹೇಳಲಾಗಿದೆ.

ಸಚಿವರಾದವರ ಕ್ಷೇತ್ರ ಹೊರತುಪಡಿಸಿ ಉಳಿದ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ತಲಾ 25 ಕೋಟಿ ರೂ. ಅನುದಾನ ನೀಡಲು ಸಿಎಂ ಸಮ್ಮತಿಸಿದ್ದಾರೆ. ಶಿವಾಜಿನಗರ, ಗೋವಿಂದರಾಜ ನಗರ, ವಿಜಯನಗರ, ಪುಲಕೇಶಿ ನಗರ, ಶಾಂತಿನಗರ ಸೇರಿದಂತೆ 9 ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡಲಾಗುವುದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...