alex Certify ಸಣ್ಣ, ಅತಿ ಸಣ್ಣ ರೈತರು, ಜನಸಾಮಾನ್ಯರಿಗೆ ಗುಡ್ ನ್ಯೂಸ್: ಭೂ ಕಬಳಿಕೆ ನಿಷೇಧ ಕಾಯ್ದೆಗೆ ತಿದ್ದುಪಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಣ್ಣ, ಅತಿ ಸಣ್ಣ ರೈತರು, ಜನಸಾಮಾನ್ಯರಿಗೆ ಗುಡ್ ನ್ಯೂಸ್: ಭೂ ಕಬಳಿಕೆ ನಿಷೇಧ ಕಾಯ್ದೆಗೆ ತಿದ್ದುಪಡಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ,  ಕರ್ನಾಟಕ ಭೂ ಕಬಳಿಕೆ (ನಿಷೇಧ) ಕಾಯಿದೆ 2011ರ  ಕಲಮು  2(ಡಿ) ಗೆ ತಿದ್ದುಪಡಿ ತರಲು ನಿರ್ಧಾರ ಮಾಡಿದ್ದು, ಜನತೆಯ ಬಹುದಿನಗಳ ಬೇಡಿಕೆಗೆ ಸ್ಪಂದಿಸಿದಂತಾಗಿದೆ.

ಪ್ರಸ್ತಾವಿತ  ಕರಡು ತಿದ್ದುಪಡಿಯು, ಯಾವುದೇ ರೀತಿಯಲ್ಲಿಯೂ ವಿಧೇಯಕದ ಮೂಲ ಕರಡಿಗೆ ವಿರುದ್ದವಾಗಿರದೆ, ಗ್ರಾಮೀಣ ಪ್ರದೇಶದ, ರೈತರ ಹಾಗೂ ಇತರರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸುವುದರಿಂದ  ರಕ್ಷಣೆ ದೊರೆಯುತ್ತದೆ.

ಸಣ್ಣ ಹಾಗೂ ಅತಿ ಸಣ್ಣ ರೈತರು ಹಾಗೂ ಜನಸಾಮಾನ್ಯರು, ಬಗರ್ ಹುಕುಂ ಸಾಗುವಳಿ ಸಂಬಂಧ,  ಬೆಂಗಳೂರಿನಲ್ಲಿ ಸ್ಥಾಪಿತವಾದ ವಿಶೇಷ ನ್ಯಾಯಾಲಯಕ್ಕೆ ಅಲೆಯುವುದನ್ನು ತಪ್ಪಿಸಿದಂತಾಗುತ್ತದೆ.

ಈ ಕುರಿತು, ಸೂಕ್ತ ನಿರ್ಧಾರಕ್ಕೆ ಬಂದು, ವಿಧೇಯಕಕ್ಕೆ ತಿದ್ದುಪಡಿ ತರಲು ನಿರ್ಧರಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್ ಅಶೋಕ್ ಅವರನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಅಭಿನಂದಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...