ಬೆಂಗಳೂರು: ಬಜೆಟ್ ನಲ್ಲಿ ಘೋಷಿಸಿದ್ದ ಪೌಷ್ಟಿಕ ಕರ್ನಾಟಕ ಹೊಸ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಯೋಜನಾ ವೆಚ್ಚವನ್ನು 185.74 ಕೋಟಿ ರೂ. ನಿಗದಿ ಮಾಡಲಾಗಿದೆ ಎಂದು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆಯ ಮೂಲಕ ಕರ್ನಾಟಕ ರಾಜ್ಯವನ್ನು ಅಪೌಷ್ಟಿಕ ಮುಕ್ತ ರಾಜ್ಯವನ್ನಾಗಿಸಲಾಗುವುದು. ಯಾವುದಾದರೂ ತಾಲೂಕುಗಳಲ್ಲಿ ರಕ್ತ ಹೀನತೆ ಮತ್ತು ಅಪೌಷ್ಟಿಕತೆಯಿಂದ ಜನ ಹೆಚ್ಚಾಗಿ ಬಳಲುತ್ತಿದ್ದಾರೆ ಎಂಬುದರ ಬಗ್ಗೆ 2019-20 ರಲ್ಲಿ ಸಮೀಕ್ಷೆ ನಡೆಸಲಾಗಿದ್ದು, ಅದರ ಆಧಾರದ ಮೇಲೆ ರಕ್ತ ಹೀನತೆ ಮತ್ತು ಪೌಷ್ಟಿಕತೆ ಹೆಚ್ಚಾಗಿರುವ ತಾಲೂಕುಗಳಲ್ಲಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಸಾಮೂಹಿಕ ತಪಾಸಣೆ, ಟ್ರ್ಯಾಕಿಂಗ್ ಮತ್ತು ಮಾನಿಟರಿ ಮಾಡಲು 102 ತಾಲೂಕುಗಳಲ್ಲಿ ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ಪೌಷ್ಟಿಕ ಆಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.