ಬೆಂಗಳೂರು: ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಮ೦ಡಿಸಲು ಮುಖ್ಯಮ೦ತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಧೇಯಕಗಳಿಗೆ ಅನುಮೋದನೆ ನೀಡಲಾಗಿದೆ.
ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) ವಿಧೇಯಕ – 2024
ಕರ್ನಾಟಕ ಅಂತರ್ಜಲ (ನಿಯಮಾವಳಿ ಮತ್ತು ಅಭಿವೃದ್ಧಿ ಹಾಗೂ ನಿರ್ವಹಣಾ ನಿಯಂತ್ರಣ) (ತಿದ್ದುಪಡಿ) ವಿಧೇಯಕ – 2024
ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ – 2024
ಚಾಣಕ್ಯ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ – 2024
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ – 2024
ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕ – 2024
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (2ನೇ ತಿದ್ದುಪಡಿ) ವಿಧೇಯಕ – 2024
ಕರ್ನಾಟಕ ಪ್ರವಾಸೋದ್ಯಮ ರೋಪ್‌ವೇಸ್ ವಿಧೇಯಕ – 2024
ಅಸಂಘಟಿಕ ಕಾರ್ಮಿಕ ಸಾಮಾಜಿಕ ಭದ್ರತೆ (ಕರ್ನಾಟಕ) (ತಿದ್ದುಪಡಿ) ನಿಯಮಗಳು – 2024